Header Ads
Header Ads
Breaking News

ಬಂಟ್ವಾಳ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಕಲೋತ್ಸವ-2019 : ಕಲೋತ್ಸವದಲ್ಲಿ ನಡಯಲಿದೆ 25ಕ್ಕೂ ಅಧಿಕ ಸ್ಪರ್ಧೆಗಳು

ಆಧುನಿಕ ತಂತ್ರಜ್ಞಾನ ಹಾಗೂ ಮಾಧ್ಯಮಗಳು ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಅವಕಾಶಗಳನ್ನು ಒದಗಿಸಿಕೊಟ್ಟಿದೆ. ವಿದ್ಯಾರ್ಥಿಗಳು ಇದನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಹೇಳಿದರು. ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬಂಟ್ವಾಳ ಕ್ಷೇತ್ರ ಸಂಪನ್ಮೂಲ ಕೇಂದ್ರ ಬಂಟ್ವಾಳ ಹಾಗೂ ಪಾಣೆಮಂಗಳೂರು ಶಾರದಾ ಪ್ರೌಢಶಾಲೆ ಹಾಗೂ ಎಸ್‌ಎಲ್‌ಎನ್‌ಪಿ ವಿದ್ಯಾಲಯದ ಸಹಯೋಗದಲ್ಲಿ ಶುಕ್ರವಾರ ಆರಂಭಗೊಂಡ ಎರಡು ದಿನಗಳ ಬಂಟ್ವಾಳ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಕಲೋತ್ಸವ-2019 ವದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಬಂಟ್ವಾಳ ತಾ.ಪಂ.ಅಧ್ಯಕ್ಷ ಚಂದ್ರಹಾಸ ಕರ್ಕೇರ ಕಲೋತ್ಸವ ಉದ್ಘಾಟಿಸಿದರು. ಈ ಸಂದರ್ಭ ತಾ.ಪಂ.ಉಪಾಧ್ಯಕ್ಷ ಅಬ್ಬಾಸ್ ಆಲಿ, ಸ್ಥಾಯಿ ಸಮಿತಿ ಅಧ್ಯಕ್ಷೆ ಧನಲಕ್ಷ್ಮೀ ಬಂಗೇರ, ಜಿ.ಪಂ.ಸದಸ್ಯರಾದ ರವೀಂದ್ರ ಕಂಬಳಿ, ಮಂಜುಳಾ ಮಾಧವ ಮಾವೆ, ಚಂದ್ರಪ್ರಕಾಶ ಶೆಟ್ಟಿ, ಮಮತಾ ಗಟ್ಟಿ, ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಎರಡು ದಿನಗಳ ಕಾಲ ನಡೆಯಲಿರುವ ಕಲೋತ್ಸವದಲ್ಲಿ 25ಕ್ಕೂ ಅಧಿಕ ಸ್ಪರ್ಧೆಗಳು ನಡೆಯಲಿದ್ದು, ತಾಲೂಕಿನ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ 2500ಕ್ಕೂ ಅಧಿಕ ವಿದ್ಯಾರ್ಥಿಗಳು ಕಲೋತ್ಸವದಲ್ಲಿ ಭಾಗವಹಿಸುತ್ತಿದ್ದಾರೆ. ಇದೇ ಸಂದರ್ಭ ತಾಲೂಕು ಪಂಚಾಯತ್ ವತಿಯಿಂದ ಕ್ರೀಡಾ ವಿದ್ಯಾರ್ಥಿಗಳಿಗೆ ನೀಡಲಾದ ಸಮವಸ್ತ್ರವನ್ನು ಅನಾವರಣಗೊಳಿಸಲಾಯಿತು.

Related posts

Leave a Reply

Your email address will not be published. Required fields are marked *