Header Ads
Header Ads
Breaking News

ಬರೋಬ್ಬರಿ ಏಳು ತಿಂಗಳ ಬಳಿಕ ಮಂಗಳೂರು ಮಹಾನಗರ ಪಾಲಿಕೆಗೆ ಚುನಾವಣೆ

ಮಂಗಳೂರು ಮಹಾನಗರ ಪಾಲಿಕೆಗೆ ಬರೋಬ್ಬರಿ ಏಳು ತಿಂಗಳ ಬಳಿಕ ಇದೀಗ ಚುನಾವಣೆ ನಡೆಸಲು ಚುನಾವಣಾ ಆಯೋಗ ನಿರ್ಧಾರಿಸಿದೆ. ಒಟ್ಟು 60 ವಾರ್ಡ್‍ಗಳಿರುವ ಪಾಲಿಕೆಗೆ ನವೆಂಬರ್ 12ರಂದು ಚುನಾವಣೆ ನಡೆಯಲಿದೆ. ಚುನಾವಣೆ ಫೋಷಣೆಯಾದ ಬೆನ್ನಲ್ಲೇ ನೀತಿ ಸಂಹಿತೆ ಜಾರಿಯಲ್ಲಿ ಬಂದಿದ್ದು, ರಾಜಕೀಯ ಪಕ್ಷಗಳ ಕಟೌಟ್, ಪ್ಲೆಕ್ಸ್, ಬ್ಯಾನರ್‍ಗಳ ತೆರವು ಕಾರ್ಯಾಚರಣೆ ನಡೆಯುತ್ತಿದೆ. 

ವಾಓ01: ಬರೋಬ್ಬರಿ ಏಳು ತಿಂಗಳ ಬಳಿಕ ಮಂಗಳೂರು ಮಹಾನಗರ ಪಾಲಿಕೆಗೆ ಚುನಾವಣೆ ದಿನಾಂಕ ಘೋಷಣೆಯಾಗಿದೆ. ಜನಪ್ರತಿನಿಧಿಗಳ ದರ್ಬಾರ್ ಇಲ್ಲದೇ ಅಧಿಕಾರಗಳೇ ಕಾರುಬಾರು ಮಾಡ್ತಾ ಇದ್ದರು. ಇದೀಗ ಮಂಗಳೂರು ಮಹಾನಗರ ಪಾಲಿಕೆ ಸೇರಿದಂತೆ ಒಟ್ಟು 14 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣಾ ದಿನಾಂಕವನ್ನು ಘೋಷಣೆ ಮಾಡಲಾಗಿದೆ. ಮಂಗಳೂರು ಮಹಾನಗರ ಪಾಲಿಕೆಯ ಒಟ್ಟು 60 ವಾರ್ಡ್‍ಗಳೂ ಸೇರಿದಂತೆ ರಾಜ್ಯದ ಒಟ್ಟು 14 ನಗರ ಸ್ಥಳೀಯ ಸಂಸ್ಥೆಗಳಿಗೆ ನವಂಬರ್ 12ರಂದು ಚುನಾವಣೆ ನಡೆಯಲಿದ್ದು ನವಂಬರ್ 14ರಂದು ಮತ ಎಣಿಕೆ ನಡೆದು ಫಲಿತಾಂಶ ಪ್ರಕಟಗೊಳ್ಳಲಿದೆ. ಇದೀಗ ಚುನಾವಣೆ ಫೋಷಣೆ ಬೆನ್ನಲ್ಲೇ ನೀತಿ ಸಂಹಿತೆ ಜಾರಿ ಬಂದಿದೆ. ಹಾಗಾಗಿ ನಗರದ ಎಲ್ಲಾ ವಾರ್ಡುಗಳಲ್ಲಿ ರಾಜಕೀಯ ಪಕ್ಷಗಳು, ರಾಜಕೀಯ ಮುಖಂಡರ ಚಿತ್ರ ಇರುವ ಎಲ್ಲಾ ರೀತಿಯ ಕಟೌಟ್, ಫ್ಲೆಕ್ಸ್, ಬ್ಯಾನರ್, ಹೋರ್ಡಿಂಗ್ ಗಳನ್ನು ತೆರವು ಕಾರ್ಯಾಚರಣೆ ಬಿರುಸಿನಿಂದ ನಡೆಯುತ್ತಿದೆ. 
ಕೆಲ ತಿಂಗಳ ಹಿಂದೆ ರಾಜ್ಯ ನಗರಾಭಿವೃದ್ಧಿ ಇಲಾಖೆಯು ಸಲ್ಲಿಸಿದ್ದ ಪಾಲಿಕೆಯ ಅಂತಿಮ ಮೀಸಲು ಪಟ್ಟಿಯಲ್ಲಿ ಆವರ್ತನ ಪದ್ಧತಿಯನ್ನ ಅನುಸರಿಲ್ಲ. ಎಂದು ಪ್ರಶ್ನಿಸಿ ಕೆಲವರು ರಾಜ್ಯ ಹೈಕೋರ್ಟ್‍ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದರು. ಇದರ ವಿಚಾರಣೆ ನಡೆಸಿದ್ದ ಹೈಕೋರ್ಟ್‍ನ ಏಕಸದಸ್ಯ ಪೀಠ ಹೊಸ ಮೀಸಲು ಪಟ್ಟಿ ಸಲ್ಲಿಸುವಂತೆ ಸರ್ಕಾರಕ್ಕೆ ಸೂಚಿಸಿತ್ತು. ಆದ್ರೆ ತೀರ್ಪಿನ ವಿರುದ್ಧ ರಾಜ್ಯ ಸರ್ಕಾರ ಮೇಲ್ಮನವಿ ಸಲ್ಲಿಸಿತ್ತು. ಹಿಂದಿನ ಸರ್ಕಾರ ಪ್ರಕಟಿಸಿದ ಮೀಸಲು ಪಟ್ಟಿ ಸಿಂಧುಗೊಳಿಸಿ ಮೇ 31ರಂದು ತೀರ್ಪು ನೀಡಲಾಗಿತ್ತು. ಈ ತೀರ್ಪು ಮರು ಪರಿಶೀಲಿಸುವಂತೆ ಕೋರಿ ಹಲವರು ಹೈಕೋಟ್ ್ಗೆ ಮತ್ತೆ ಅರ್ಜಿ ಸಲ್ಲಿಸಿದ್ರು. ಮರು ಪರಿಶೀಲನೆಗೆ ನಿರಾಕರಿಸಿದ ಹೈಕೋರ್ಟ್ ಅರ್ಜಿಯನ್ನ ವಜಾ ಮಾಡಿದೆ. ಈ ಎಲ್ಲ ಪ್ರಕ್ರಿಯೆಗಳಿಂದಾಗಿ ಮಂಗಳೂರು ಮಹಾನಗರ ಪಾಲಿಕೆ ಚುನಾವಣೆಗೆ 8 ತಿಂಗಳ ವಿಳಂಬವಾಗಿ ನವೆಂಬರ್ 14ಕ್ಕೆ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿದೆ. ದಕ್ಷಿಣ ಕನ್ನಡ ಜಿಲ್ಲಾಡಳಿತ ಮಂಗಳೂರು ಮಹಾನಗರ ಪಾಲಿಕೆ ಚುನಾವಣೆ ಎಲ್ಲಾ ರೀತಿಯ ಸಿದ್ಧತೆಯನ್ನ ನಡೆಸಿಕೊಂಡಿದೆ.


 ಮಂಗಳೂರು ಮಹಾನಗರ ಪಾಲಿಕೆಯ ಆಡಳಿತ ಮಾರ್ಚ್ 7ಕ್ಕೆ ಕೊನೆಗೊಂಡಿತ್ತು. ಅದರ ಬಳಿಕ ಚುನಾಯಿತ ಪ್ರತಿನಿಧಿಗಳಿಲ್ಲದೆ ಅಧಿಕಾರಿಗಳು ಮೂಲಕವೇ ಕೆಲಸ ಕಾರ್ಯಗಳು ನಡೆಯುತ್ತಿದೆ. ಜನತೆ ತಮ್ಮ ಕೆಲಸ ಕಾರ್ಯಗಳಿಗಾಗಿ ಅಥವಾ ಗೋಳು ಹೇಳಿಕೊಳ್ಳಲು ಅಧಿಕಾರದಲ್ಲಿ ಕಾರ್ಪೋರೇಟರ್‍ಗಳೇ ಇರಲಿಲ್ಲ. ಇದೀಗ ಕೊನೆಗೂ ಚುನಾಯಿತ ಆಡಳಿತ ಬರಲು ಅಧಿಕೃತ ಮುದ್ರೆ ಬಿದ್ದಿದೆ. ಒಟ್ಟಿನಲ್ಲಿ ಜಿಲ್ಲಾಡಳಿತ ಈಗಾಗಲೇ ಚುಣಾವಣೆ ಘೋಷಣೆ ಬೆನ್ನಲ್ಲೇ ಸಕಲ ಸಿದ್ಧತೆಯನ್ನ ಮಾಡಿಕೊಂಡಿದ್ದು, ಇತ್ತ ರಾಜಕೀಯ ಪಕ್ಷಗಳು ಕೂಡ ಇಂದಿನಿಂದಲೇ ಬಿರುಸಿನ ಪ್ರಚಾರಕ್ಕೆ ಸಿದ್ಧತೆಯನ್ನ ಮಾಡಿಕೊಂಡಿದೆ.

Related posts

Leave a Reply

Your email address will not be published. Required fields are marked *