Header Ads
Header Ads
Breaking News

ಪ್ರಿಯಾಂಕಾ ಗಾಂಧಿ ಬಂಧನದ ವಿರುದ್ಧ ಮಂಗಳೂರಲ್ಲಿ ಕಾಂಗ್ರೆಸ್ ಪ್ರತಿಭಟನೆ

 ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರನ್ನ ಉತ್ತರ ಪ್ರದೇಶದಲ್ಲಿ ಬಂಧಿಸಿರುವ ಕೇಂದ್ರ ಸರ್ಕಾರದ ವಿರುದ್ಧ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ನಗರದ ಮಲ್ಲಿಕಟ್ಟೆಯಲ್ಲಿರುವ ಕಾಂಗ್ರೆಸ್ ಕಚೇರಿ ಮುಂಭಾಗದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಧರಣಿಯನ್ನ ನಡೆಸಿದ್ರು.

ಈ ವೇಳೆ ಮಾತನಾಡಿದ ಮಾಜಿ ಸಚಿವ ಬಿ.ರಮಾನಾಥ್ ರೈ, ಪ್ರಿಯಾಂಕಾ ಗಾಂಧಿಯನ್ನ ಬಂಧಿಸಿದ ಬಿಜೆಪಿ ಸರ್ಕಾರ ಅಧಿಕಾರ ದುರ್ಬಳಕೆ ಮಾಡಿಕೊಂಡಿದೆ.ಅಲ್ಲದೇ ಬಿಜೆಪಿಗರು ಪ್ರಜಾಪ್ರಭುತ್ವವನ್ನು ಅಣಕಿಸುತ್ತಿದ್ದಾರೆ ಎಂದು ಅಪಾದಿಸಿದರು. ಇನ್ನು ಪಕ್ಷಾಂತರ ಕಾಯಿದೆಗೆ ಯಾರೂ ಕೂಡ ಬೆಂಬಲ ನೀಡಬಾರೆಂದು ಆಗ್ರಹಿಸಿದರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್,ಮಾಜಿ ಸಚಿವ ಕೆ.ಅಭಯಚಂದ್ರ ಜೈನ್ ಸೇರಿದಂತೆ ಮತ್ತಿತರ ಕಾಂಗ್ರೆಸ್ ನಾಯಕರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ರು.

Related posts

Leave a Reply

Your email address will not be published. Required fields are marked *