Header Ads
Header Ads
Breaking News

ಬಿ.ಡಬ್ಲ್ಯು.ಎಫ್. ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‍ಶಿಪ್ : ಸ್ವರ್ಣಪದಕ ಗೆದ್ದ ಭಾರತದ ಹೆಮ್ಮೆಯ ಕುವರಿ ಪಿ.ವಿ. ಸಿಂಧು

ಬಿ.ಡಬ್ಲ್ಯು.ಎಫ್. ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‍ಶಿಪ್‍ನಲ್ಲಿ ಭಾರತದ ಪಿ.ವಿ. ಸಿಂಧು ಅವರು ಸ್ವರ್ಣ ಪದಕ ಗೆದ್ದಿದ್ದಾರೆ. ನಿನ್ನೆ ನಡೆದ ಫೈನಲ್ ಕಾದಾಟದಲ್ಲಿ ವಿಶ್ವದ 5ನೇ ಶ್ರೇಯಾಂಕಿತ ಆಟಗಾರ್ತಿಯಾಗಿರುವ ಸಿಂಧು ಅವರು ವಿಶ್ವದ ನಾಲ್ಕನೇ ಶ್ರೇಯಾಂಕಿತೆ ಜಪಾನಿನ ನೊಜೊಮಿ ಒಕುಹರಾ ಅವರನ್ನು ಸೋಲಿಸುವ ಮೂಲಕ ಈ ಸಾಧನೆಯನ್ನು ಮಾಡಿದರು. ಸಿಂಧು ಅವರು ಆಲ್ ಇಂಗ್ಲೆಂಡ್ ಬ್ಯಾಡ್ಮಿಂಟನ್ ಚಾಂಪಿಯನ್ ಚೀನದ ಚೆನ್ ಯು ಫೀ ವಿರುದ್ಧ ಭರ್ಜರಿ ಗೆಲುವು ಸಾಧಿಸಿ ಭಾರತೀಯರಲ್ಲಿ ಚಿನ್ನದ ಆಶಾಕಿರಣವನ್ನು ಮೂಡಿಸಿದ್ದರು. ಇದು ಭಾರತೀಯ ಆಟಗಾರರೊಬ್ಬರು ವಿಶ್ವ ಚಾಂಪಿಯನ್‍ಶಿಪ್‍ನಲ್ಲಿ ಗೆದ್ದ ಮೊತ್ತಮೊದಲ ಸ್ವರ್ಣವಾಗಿದೆ. ಜಪಾನಿನ ಒಕುಹಾರ ಅವರನ್ನು ಸಿಂಧು 21-7, 21-7 ನೇರ ಸೆಟ್‍ಗಳಲ್ಲಿ ಸೋಲಿಸಿ ಇತಿಹಾಸ ನಿರ್ಮಿಸಿದರು. ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್ ನಲ್ಲಿ ಸಿಂಧು ಅವರು 2013 ಮತ್ತು 2014ರಲ್ಲಿ ಕಂಚಿನ ಪದಕ ಗೆದ್ದಿದ್ದರು. 2017 ಹಾಗೂ 2018ರಲ್ಲಿ ಬೆಳ್ಳಿ ಪದಕಕ್ಕೆ ತೃಪ್ತಿ ಪಟ್ಟುಕೊಂಡಿದ್ದರು. ಆದರೆ ಈ ಬಾರಿ ಇಲ್ಲಿ ಭರ್ಜರಿಯಾಗಿ ಗೆಲ್ಲುವ ಮೂಲಕ ಪಿ ವಿ ಸಿಂಧು ಅವರು ಚಿನ್ನದ ನಗೆ ಬೀರಿದ್ದಾರೆ.

Related posts

Leave a Reply

Your email address will not be published. Required fields are marked *