Header Ads
Header Ads
Breaking News

ಬೆಳ್ಳಿ ಹಬ್ಬದ ಸಂಭ್ರಮದಲ್ಲಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ:ನೆಂಪು-ತಮ್ಮನ- ಯಕ್ಷಗಾನ,ಕೆ.ಹೆಚ್. ದಾಸಪ್ಪ ರೈ ಅವರಿಗೆ ಸನ್ಮಾನ ಕಾರ್ಯಕ್ರಮ.

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಗರದ ತುಳುಭವನದ ಸಿರಿಚಾವಡಿಯಲ್ಲಿ ತುಳು ಯಕ್ಷ ಸಿರಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಕೋಟಿ ಚೆನ್ನಯ್ಯ ಯಕ್ಷಗಾನ ಪ್ರದರ್ಶನಗೊಂಡಿತು.
ಮಂಗಳೂರಿನ ಉರ್ವಸ್ಟೋರ್‌ನಲ್ಲಿರುವ ತುಳುಭವನದ ಸಿರಿಚಾವಡಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಬೋಳಾರದ ಮರಿಯಮ್ಮ ಮಹಿಷಮರ್ದಿನಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಗರುಕಾರ್‌ರಾದ ತಾರನಾಥ ಶೆಟ್ಟಿ ಅವರು ಮುಖ್ಯ ಅತಿಥಿಯಾಗಿದ್ದರು.
ಕಾರ್ಯಕ್ರಮದಲ್ಲಿ ದಿವಂಗತ ಪೊಳಲಿ ಲೋಕಯ್ಯ ಅವರ ಭಾವಚಿತ್ರಕ್ಕೆ ಗಣ್ಯರು ಪುಷ್ಪನಮನ ಸಲ್ಲಿಸಿದರು. ಇದೇ ವೇಳೆ ಜನಾರ್ದನ ಅಮ್ಮುಂಜೆ ಅವರು ದಿವಂಗತ ಪೊಳಲಿ ಲೋಕಯ್ಯ ಅವರ ನೆನಪುಗಳನ್ನು ಬಿಚ್ಚಿಟ್ಟರು.


ಕಾರ್ಯಕ್ರಮದಲ್ಲಿ ಯಕ್ಷಗಾನ ಕಲಾವಿದ ಕೆ.ಹೆಚ್. ದಾಸಪ್ಪ ರೈ ಅವರನ್ನು ಸನ್ಮಾನಿಸಲಾಯಿತು.
ಈ ಸಂದರ್ಭ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಎ.ಸಿ ಭಂಡಾರಿ, ರಿಜಿಸ್ಟ್ರಾರ್ ಚಂದ್ರಹಾಸ ರೈ ಬಿ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ರಾಜೇಶ್ ಬಿ. ಸದಸ್ಯರಾದ ಬೆನೆಟ್ ಜಿ. ಅಮ್ಮಣ್ಣ, ಎಂ. ದೇವಾನಂದ್ ಭಟ್ ಮತ್ತಿತರರು ಉಪಸ್ಥಿತರಿದ್ದರು.


ಈ ಸಂದರ್ಭ ಕೋಟಿ ಚೆನ್ನಯ್ಯ ಯಕ್ಷಗಾನ ಪ್ರದರ್ಶನಗೊಂಡಿತು.

Related posts

Leave a Reply