Header Ads
Header Ads
Header Ads
Breaking News

ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಡಿ. 17 ರಂದು ಮಂಗಳೂರಿನಲ್ಲಿ ಹಕ್ಕೊತ್ತಾಯ ಸಭೆ

ಸಾಲಮನ್ನಾ, ಕೊಳೆರೋಗ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಘಟಕದ ಆಶ್ರಯದಲ್ಲಿ ಜಿಲ್ಲೆಯ ರೈತರ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ ಪ್ರತಿಭಟನಾ ಮೆರವಣಿಗೆ ಮತ್ತು ಬೃಹತ್ ಹಕ್ಕೊತ್ತಾಯ ಸಭೆ ಡಿ. 17ರಂದು ಮಂಗಳೂರಿನಲ್ಲಿ ನಡೆಯಲಿದೆ ಎಂದು ಸುಳ್ಯ ತಾಲೂಕು ರೈತ ಸಂಘದ ಕಾರ್ಯದರ್ಶಿ ತೀರ್ಥರಾಮ ನೆಡ್ಚಿಲ್ ಹೇಳಿದರು.

ಅವರು ಸುಳ್ಯದಲ್ಲಿ ಸುದ್ದಿಗೋಷ್ಟಿಯನ್ನು ಉದ್ದೇಶಿಸಿ ಮಾತನಾಡಿ ಸಾಲಮನ್ನಾ ಯೋಜನೆಯಲ್ಲಿ ಅತೀ ಹೆಚ್ಚು ತೊಂದರೆಗೊಳಗಾದವರು ದಕ್ಷಿಣ ಕನ್ನಡದ ರೈತರು. ಈ ಸಾಲಮನ್ನಾದ ಗೊಂದಲ ಇನ್ನೂ ನಿವಾರಣೆ ಆಗಿಲ್ಲ. ಕಳೆದ ಬಾರಿ ಅರಂತೋಡಿನಲ್ಲಿ ಪ್ರತಿಭಟನೆ ಸಂದರ್ಭ ಸಹಕಾರ ಇಲಾಖೆಯವರು ಬಂದು 15 ದಿನಗಳ ಒಳಗೆ ಸಮಸ್ಯೆಗಳನ್ನು ಇತ್ಯರ್ಥ ಪರಿಹರಿಸುವ ಭರವಸೆ ನೀಡಿ ಒಂದು ತಿಂಗಳು ಕಳೆದರೂ ಗೊಂದಲ ನಿವಾರಣೆ ಆಗಿಲ್ಲ. ಈ ಸಮಸ್ಯೆಯನ್ನು ಕೂಡಲೇ ಪರಿಹರಿಸಿ ಸಾಲಮನ್ನಾ ಹಣ ಬರುವಂತೆ ಮಾಡಬೇಕು ಎಂದು ಒತ್ತಾಯಿಸಿದರು.

ಸುದ್ದಿಗೋಷ್ಟಿಯಲ್ಲಿ ರೈತ ಸಂಘದ ಮುಖಂಡರಾದ ದಿವಾಕರ ಪೈ, ಸೆಬಾಸ್ಟಿಯನ್ ಮಡಪ್ಪಾಡಿ, ತೀರ್ಥರಾಮ ಗೌಡ ಉಳುವಾರು, ಮೋಹನ ಅಡ್ತಲೆ, ಜಯಪ್ರಕಾಶ್ ನೆಕ್ರೆಪ್ಪಾಡಿ, ದೇವಪ್ಪ ಗೌಡ ಕುಂದಲ್ಪಾಡಿ ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *