Header Ads
Header Ads
Breaking News

ಬ್ರಹ್ಮಾವರ ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿಯಿಂದ ಕಿರುಕುಳ ಆರೋಪ: ಆತ್ಮಹತ್ಯೆಗೆ ಯತ್ನಿಸಿದ ಆರೋಗ್ಯ ಸಹಾಯಕ

ಬ್ರಹ್ಮಾವರ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಕಿರುಕುಳ ನೀಡಿದ್ದಾರೆಂದು ಆರೋಪಿಸಿ ಡೆತ್‌ನೋಟ್ ಬರೆದಿಟ್ಟು ವಿಷ ಸೇವಿಸಿ ಕಿರಿಯ ಆರೋಗ್ಯ ಸಹಾಯಕ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರದಲ್ಲಿ ನಡೆದಿದೆ.ಆತ್ಮಹತ್ಯೆಗೆ ಯತ್ನಿಸಿದಾತ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಮೂಡಲ ವಿಠಲಾಪುರ್ ನಾಗರಾಜ್ ಎಂದು ಗುರುತಿಸಲಾಗಿದೆ.

ಈತ ಬ್ರಹ್ಮಾವರದ  ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮೂರು ತಿಂಗಳ ಹಿಂದೆ ಕೆಲಸಕ್ಕೆ ನೇಮಕಗೊಂಡಿದ್ದ. ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಕಿರುಕುಳ ನೀಡುತ್ತಿದ್ದಾರೆಂದು ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್ ಅವರಿಗೆ ಪತ್ರ ಬರೆದಿಟ್ಟು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಈ ಬಗ್ಗೆ ಡಿ.ಹೆಚ್‌ಒಗೆ ದೂರು ನೀಡಿದ್ದರೂ ಪ್ರಯೋಜವಾಗದೇ ಮನನೊಂದು ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎನ್ನಲಾಗಿದೆ. ಸದ್ಯ ಮಣಿಪಾಲ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ನಾಗರಾಜ್ ಚಿಕಿತ್ಸೆ ಪಡೆಯುತಿದ್ದಾನೆ.

Related posts

Leave a Reply