Breaking News

ಬ್ಲಾಕ್ ಕಾಂಗ್ರೆಸ್ ಮಹಿಳಾ ಘಟಕದಿಂದ ವೈದ್ಯಕೀಯ ಶಿಬಿರ ಆಗಸ್ಟ್ ೧೩ರಂದು ಮೂಡಬಿದರೆ ಸಮಾಜ ಮಂದಿರದಲ್ಲಿ ಆಯೋಜನೆ

 
ಮೂಡುಬಿದಿರೆ: ಇಂದಿರಾ ಗಾಂಧಿ ಜನ್ಮಶತಾಬ್ಧಿ ಅಂಗವಾಗಿ ಬ್ಲಾಕ್ ಕಾಂಗ್ರೆಸ್ ಮಹಿಳಾ ಘಟಕ ಮೂಡುಬಿದಿರೆ ಆಶ್ರಯದಲ್ಲಿ ಕೆ.ಎಂ.ಸಿ ಆಸ್ಪತ್ರೆ ಅತ್ತಾವರ-ಮಂಗಳೂರು ಇವರ ಸಹಯೋಗದೊಂದಿಗೆ ವೈದ್ಯಕೀಯ ಉಚಿತ ಶಿಬಿರ ಆಗಸ್ಟ್ ೧೩ರಂದು ಬೆಳಗ್ಗೆ ೯ರಿಂದ ಮಧ್ಯಾಹ್ನ ೧೩.೩೦ರವರೆಗೆ ಮೂಡುಬಿದಿರೆ ಸಮಾಜಮಂದಿರದಲ್ಲಿ ನಡೆಯಲಿದೆ ಎಂದು ಬ್ಲಾಕ್ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಸುಪ್ರಿಯಾ ಡಿ.ಶೆಟ್ಟಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಹರೀಶ್ ಕುಮಾರ್ ಶಿಬಿರವನ್ನು ಉದ್ಘಾಟಿಸಲಿದ್ದಾರೆ. ಬ್ಲಾಕ್ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಸುಪ್ರಿಯಾ ಡಿ.ಶೆಟ್ಟಿ ಸಮಾರಂಭದ ಅಧ್ಯಕ್ಷತೆ ವಹಿಸಲಿರುವರು. ಮೂಡುಬಿದಿರೆ ಶಾಸಕ ಕೆ.ಅಭಯಚಂದ್ರ ಜೈನ್, ಮೂಡುಬಿದಿರೆ ಪುರಸಭಾ ಅಧ್ಯಕ್ಷೆ ಹರಿಣಾಕ್ಷಿ ಸುವರ್ಣ, ಉಪಾಧ್ಯಕ್ಷ ವಿನೋದ್ ಸೆರಾವೊ, ಸ್ಥಾಯಿ ಸಮಿತಿ ಅಧ್ಯಕ್ಷ ಕೊರಗಪ್ಪ, ಕೆಪಿಸಿಸಿ ಹಿಂದುಳಿದ ವರ್ಗಗಳ ವಿಭಾಗದ ಕಾರ್ಯದರ್ಶಿ ರುಕ್ಕಯ್ಯ ಪೂಜಾರಿ, ದ.ಕ ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಶ್ಯಾಲೆಟ್ ಪಿಂಟೊ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ, ಯುವ ಕಾಂಗ್ರೆಸ್ ಮೂಡುಬಿದಿರೆ ಬ್ಲಾಕ್ ಅಧ್ಯಕ್ಷ ಚಂದ್ರಹಾಸ ಸನಿಲ್, ಮೂಡಾ ಅಧ್ಯಕ್ಷ ಸುರೇಶ್ ಪ್ರಭು ಅಕ್ರಮ ಸಕ್ರಮ ಸಮಿತಿ ಅಧ್ಯಕ್ಷ ಪಿ.ಕೆ ಥೋಮಸ್, ಜಿಲ್ಲಾ ಯೋಜನಾ ಸಮಿತಿ ಸದಸ್ಯ ಸುರೇಶ್ ಕೋಟ್ಯಾನ್, ಭೂ ನ್ಯಾಯ ಮಂಡಳಿ ಸದಸ್ಯ ಮಹಮ್ಮದ್ ಅಸ್ಲಾಂ ಉಪಸ್ಥಿತರಿರುವರು. ಶಿಬಿರದಲ್ಲಿ ಸಾಮಾನ್ಯ ಆರೋಗ್ಯ ತಪಾಸಣೆ, ಕಣ್ಣಿನ ತಜ್ಞರು, ಕಿವಿ, ಮೂಗು ಮತ್ತು ಗಂಟಲು ತಜ್ಞರು, ಎಲುಬು ತಜ್ಞರು, ಸ್ತ್ರೀರೋಗ ತಜ್ಞರು, ಮಧುಮೇಹ ತಪಾಸಣೆ ನಡೆಯಲಿದೆ. ಅಭಯಚಂದ್ರ ಜೈನ್ ವತಿಯಿಂದ ಕನ್ನಡಕವನ್ನು ಉಚಿತವಾಗಿ ವಿತರಿಸಲಾಗುವುದು ಎಂದು ಸುಪ್ರಿಯಾ ಶೆಟ್ಟಿ ಮಾಹಿತಿ ನೀಡಿದರು.
ಮೂಡುಬಿದಿರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಲೇರಿಯನ್ ಸಿಕ್ವೇರಾ, ಬ್ಲಾಕ್ ಕಾಂಗ್ರೆಸ್ ಮಹಿಳಾ ಘಟಕದ ಉಪಾಧ್ಯಕ್ಷೆ ಪ್ರೇಮಾ ನಾಯ್ಕ್, ಪ್ರಧಾನ ಕಾರ್ಯದರ್ಶಿ ಜಯಲಕ್ಷ್ಮೀ ಸುದ್ದಿಗೋಷ್ಠಿಯಲ್ಲಿದ್ದರು.
ವರದಿ: ಪ್ರೇಮಶ್ರೀ ಮೂಡಬಿದರೆ

Related posts

Leave a Reply