Header Ads
Breaking News

ಭಜನೆಯಿಂದ `ಅಂತರಂಗ ಶುದ್ಧ’ ಬದುಕು ಸಾಧ್ಯ : ಧರ್ಮಸ್ಥಳ ಕ್ಷೇತ್ರದ ಮಾತೃಶ್ರೀ ಹೇಮಾವತಿ ಹೆಗ್ಗಡೆ ಅಭಿಪ್ರಾಯ

ಪುತ್ತೂರು; ಮನಸ್ಸಿನ ಪರಿವರ್ತನೆಯಾಗುವ ಭಜನೆಯಿಂದ ಅಂತರಂಗ ಶುದ್ಧಿಯಾಗುತ್ತದೆ. ದೇವರ ಸ್ಪರ್ಶದಿಂದ ನಾವು ಗಟ್ಟಿಯಾಗುತ್ತೇವೆ. ಆದರೆ ತಂದೆ ತಾಯಿಯರನ್ನು ಪೆÇೀಷಿಸದವರು ಯಾವ ಭಜನೆ ಮಾಡಿದರೂ ಪ್ರಯೋಜನವಿಲ್ಲ. ದುಶ್ಚಟ ಬಿಟ್ಟು ಉತ್ತಮ ನಾಗರಿಕರಾಗಿ ಬದುಕು ಕಟ್ಟಿಕೊಳ್ಳುವುದು ಅತೀ ಅಗತ್ಯ ಎಂದು ಧರ್ಮಸ್ಥಳ ಕ್ಷೇತ್ರದ ಮಾತೃಶ್ರೀ ಹೇಮಾವತಿ ಹೆಗ್ಗಡೆ ಅಭಿಪ್ರಾಯಪಟ್ಟರು.

ಪುತ್ತೂರು ಮಹಾಲಿಂಗೇಶ್ವರ ದೇವಳದ ದೇವರಮಾರು ಗದ್ದೆಯಲ್ಲಿ ಧರ್ಮಸ್ಥಳ ಭಜನಾ ಪರಿಷತ್ ಮತ್ತು ಪುತ್ತೂರು ಭಜನಾ ಸತ್ಸಂಗ ಸಮಾವೇಶ ಸಮಿತಿ ಸಂಯುಕ್ತ ಆಶ್ರಯದಲ್ಲಿ ಭಜನಾ ಸತ್ಸಂಗ ಸಮಾವೇಶದ ಸಮಾರೋಪದಲ್ಲಿ ಅವರು ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಭಜನಾ ಸತ್ಸಂಗ ಸಮಾವೇಶದ ರೂವಾರಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವಿರೇಂದ್ರ ಹೆಗ್ಗಡೆ ಅವರು ಮಾತನಾಡಿ, ಭಜನೆ ಎಂಬುವುದು ವ್ಯಕ್ತಿ ಸಂಸಾರದ ಮೇಲೆ ಪ್ರಭಾವ ಬೀರುತ್ತದೆ. ಇಂದು ಭಜನೆಯಲ್ಲೂ ಶಿಸ್ತುಬದ್ಧ ಆಚರಣೆ ನಡೆಯುವ ಮೂಲಕ ಪರಿವರ್ತನೆಯಾಗಿದೆ. ದೇವರು ಮತ್ತು ಮನುಷ್ಯರ ನಡುವಿನ ಸಂಬಂಧ ಬೆಳೆಸುವ ಭಜನೆ ಅಂತರಂಗದ ಶುದ್ಧೀಕರಣಕ್ಕೆ ಉತ್ತಮ ಮಾರ್ಗವಾಗಿದೆ. ಆದರೆ ಅಂತರಂಗ ಶುದ್ಧವಿಲ್ಲದೆ ಯಾವ ಭಜನೆ ಮಾಡಿದರೂ ಫಲಸಿಗಲಾರದು ಎಂದು ಹೇಳಿದರು.

ಆಶೀರ್ವಚನ ನೀಡಿದ ಒಡಿಯೂರು ಗುರುದೇವಾನಂದ ಸ್ವಾಮೀಜಿ ಅವರು ಅನಾಥಾಶ್ರಮಗಳು ಮತ್ತು ವೃದ್ಧಾಶ್ರಮಗಳ ಸಂಖ್ಯೆ ಕಡಿಮೆಯಾಗಬೇಕಾದರೆ ಅದಕ್ಕೆ ಭಜನೆ ಉತ್ತಮವಾದ ಮಾರ್ಗ. ಭಜನೆ ಎಂಬುವುದು `ಅಜನೆ’ಯಾದರೆ ಶಾಂತಿ ನೆಮ್ಮದಿ ಉಮಟಾಗುತ್ತದೆ. ಹನುಮ ಜಯಂತಿಯನ್ನು ಭಜನಾದಿನವನ್ನಾಗಿ ರಾಜ್ಯ ಸರ್ಕಾರ ಘೋಷಿಸಬೇಕು ಎಂದು ಹೇಳಿದರು.

ಆಶೀರ್ವಚನ ನೀಡಿದ ಸುಬ್ರಹ್ಮಣ್ಯ ಸಂಪುಟ ನರಸಿಂಹ ಮಠದ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಅವರು, ಸತ್‍ಸಂಗದಿಂದ ಇಲ್ಲದಿದ್ದರೆ ಬದುಕಿನಲ್ಲಿ `ಕಳೆ’ ಬೆಳೆಯುತ್ತದೆ. ಹಾಗಾಗಿ ಬದುಕಿನಲ್ಲಿ ಸಾತ್ವಿಕ ದೃಢ ಸಂಕಲ್ಲಪ ಅಗತ್ಯ ಎಂದರು.

ಕಾರ್ಯಕ್ರಮದ ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಶಾಸಕ ಸಂಜೀವ ಮಠಂದೂರು, ತಾಪಂ ಅಧ್ಯಕ್ಷ ರಾಧಾಕೃಷ್ಣ ಬೋರ್ಕರ್, ತಾಪಂ ಕಾರ್ಯನಿರ್ವಹಣಾಧಿಕಾರಿ ನವೀನ್ ಭಂಡಾರಿ ಭಾಗವಹಿಸಿದ್ದರು. ಶ್ರೀಧಾಮ ಮಾಣಿಲದ ಮೋಹನದಾಸ ಪರಮಹಂಸ ಸ್ವಾಮೀಜಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಲ್.ಎಚ್. ಮಂಜುನಾಥ, ಮಾಜಿ ಶಾಸಕಿಯರಾದ ಶಕುಂತಳಾ ಟಿ ಶೆಟ್ಟಿ, ಮಲ್ಲಿಕಾ ಪ್ರಸಾದ್, ಕೇಂದ್ರ ಒಕ್ಕೂಟದ ನಿರ್ಗಮನ ಅಧ್ಯಕ್ಷ, ರಾಮಣ್ಣ ಗೌಡ ಗುಂಡೋಳೆ, ನೂತನ ಅಧ್ಯಕ್ಷ ಬಾಲಕೃಷ್ಣ ಗೌಡ ನೆಲ್ಯಾಡಿ, ಸಾಜ ರಾಧಾಕೃಷ್ಣ ಆಳ್ವ, ಪದ್ಮನಾಭ ಶೆಟ್ಟಿ, ಜನಜಾಗೃತಿ ವೇದಿಕೆಯ ತಾಲೂಕು ಅಧ್ಯಕ್ಷ ಮಹಾಬಲ ರೈ ಒಳತ್ತಡ್ಕ, ಭಜನಾ ಪರಿಷತ್ತಿನ ಅಧ್ಯಕ್ಷ ಬಾಲಕೃಷ್ಣ ಪಂಜ, ಪ್ರಧಾನ ಕಾರ್ಯದರ್ಶಿ ಜಯರಾಮ ನೆಲ್ಲಿತ್ತಾಯ, ಧರ್ಮಸ್ಥಳ ಯೋಜನೆಯ ಜಿಲ್ಲಾ ನಿರ್ದೇಶಕ ಸತೀಶ್ ಶೆಟ್ಟಿ, ಉಡುಪಿ ವಿಭಾಗದ ಪ್ರಾದೇಶಿಕ ನಿರ್ದೇಶಕ ವಸಂತ ಸಾಲ್ಯಾನ್, ತಾಲೂಕು ಯೋಜನಾಧಿಕಾರಿ ಜನಾರ್ಧನ ಎಸ್, ಕೋಶಾಧಿಕಾರಿ ಚಂದ್ರನ್ ತಲಪಾಡಿ, ಭಜನಾ ಸತ್ಸಂಗ ಸಮಾವೇಶದ ಅಧ್ಯಕ್ಷ ಧನ್ಯಕುಮಾರ್ ರೈ ಬಿಳಿಯೂರುಗುತು,್ತ ಕಾರ್ಯಾಧ್ಯಕ್ಷ ಅರುಣ್ ಕುಮಾರ್ ಪುತ್ತಿಲ, ಜಿಲ್ಲಾ ಸಂಚಾಲಕ ಶಶಿಕುಮಾರ್ ಬಾಲ್ಯೊಟ್ಟು, ಪ್ರಧಾನ ಕಾರ್ಯದರ್ಶಿ ಲೋಕೇಶ್ ಬೆತ್ತೋಡಿ ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *