Header Ads
Breaking News

ಮಂಗಳೂರಿಗೆ ಸದ್ಗುರು ಶ್ರೀ ಮಾತಾ ಅಮೃತಾನಂದಮಯಿ ದೇವಿ ಆಗಮನ

ಸದ್ಗುರು ಶ್ರೀ ಮಾತಾ ಅಮೃತಾನಂದಮಯಿ ದೇವಿ ಮಂಗಳೂರಿಗೆ ಆಗಮಿಸಿದ್ದಾರೆ.ನಗರದ ಬೋಳೂರು ಅಮೃತ ವಿದ್ಯಾಲಯದಲ್ಲಿ ಅಮೃತ ಸಂಗಮ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದರು. ಈ ವೇಳೆ ವಿವಿಧ ಕಡೆಗಳಿಂದ ಸಾವಿರಾರು ಮಂದಿ ಭಕ್ತರು ಅಮ್ಮ ದರ್ಶನ ಪಡೆಯಲು ಆಗಮಿಸಿದ್ರು.

ಮಂಗಳೂರಿನ ಬೋಳೂರು ಅಮೃತ ವಿದ್ಯಾಲಯದಲ್ಲಿ 2 ದಿನಗಳ ಅಮೃತಸಂಗಮ ಕಾರ್ಯಕ್ರಮ ನಡೆಯಲಿದೆ. ಸದ್ಗುರು ಶ್ರೀ ಮಾತಾ ಅಮೃತಾನಂದಮಯಿ ದೇವಿ ಅವರು ಅಮೃತ ಸಂಗಮ ಕಾರ್ಯಕ್ರಮದಲ್ಲಿ ಭಕ್ತರಿಗೆ ಆರ್ಶೀವಚನ ನೀಡಿದರು.ಇಂದು ನಾವು ವೇಗದ ಯುಗದಲ್ಲಿದ್ದೇವೆ. ಜೀವನವೆಂಬ ಓಟದಲ್ಲಿ ಯಾರಿಗೂ ಸಮಯವೇ ಇಲ್ಲ. ಬಾಹ್ಯದಲ್ಲಿ ಮಾತ್ರವಲ್ಲದೆ, ಅಂತರಂಗದಲ್ಲಿಯೂ ವೇಗದ ಹೊಡೆತಕ್ಕೆ ಸಿಲುಕಿದ್ದೇವೆ. ವೇಗಕ್ಕೆ ಕಾರಣವಾಗಿರುವ ವಿಜ್ಞಾನ ತಂತ್ರಜ್ಞಾನದ ಜತೆಗೆ ಪ್ರಕೃತಿ ಹಾಗೂ ಸಂಸ್ಕೃತಿಗೂ ಸಮಾನ ಮಹತ್ವ ನೀಡಿ ಎಂದು ಸದ್ಗುರು ಶ್ರೀ ಮಾತಾ ಅಮೃತಾನಂದಮಯಿ ದೇವಿಹೇಳಿದರು.

ಅಮೃತಶ್ರೀ ಸ್ವಸಹಾಯ ಗುಂಪಿನ ಮಹಿಳೆಯರಿಗೆ ಸೀರೆ ವಿತರಣೆ,40 ಮಂದಿ ಅಂಗವಿಕಲ ಫಲಾನುಭವಿಗಳಿಗೆ ವೀಲ್‍ಚೇರ್, ವಿದ್ಯಾಮೃತ ಯೋಜನೆಯಲ್ಲಿ 22 ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದಾರ್ಥಿ ವೇತನ, 30 ಮಹಿಳೆಯರಿಗೆ ಹೊಲಿಗೆ ಯಂತ್ರ ವಿತರಿಸಲಾಯಿತು. ಮಹಿಳಾ ದಿನಾಚರಣೆ ಹಿನ್ನೆಲೆಯಲ್ಲಿ ಬಾಳೆಯ ನಾರು-ಹತ್ತಿಯ ಬಟ್ಟೆಯಿಂದ ತಯಾರಿಸಲಾದ ಸ್ಯಾನಿಟರಿ ಪ್ಯಾಡ್‍ಗಳನ್ನು ಮಹಿಳೆಯರಿಗೆ ವಿತರಿಸಲಾಯಿತು. ಇದೇ ವೇಳೆ ಅಮೃತ ಸಂಗಮ ಸ್ಮರಣ ಸಂಚಿಕೆ ಬಿಡುಗಡೆ ಹಾಗೂ ಅಮಲ ಭಾರತ ಸ್ವಚ್ಛತಾ ಅಭಿಯಾನದ ಭಾಗವಾಗಿ ಸುಲ್ತಾನ್ ಬತ್ತೇರಿಯಲ್ಲಿ ಸಾರ್ವಜನಿಕ ಶೌಚಗೃಹ ಹಾಗೂ ಸ್ನಾನಗೃಹ ನಿರ್ಮಾಣಕ್ಕೆ ಚಾಲನೆ ನೀಡಲಾಯಿತು.ಈ ವೇಳೆ ಸಂಸದ ನಳಿನ್‍ಕುಮಾರ್ ಕಟೀಲ್, ಶಾಸಕರಾದ ವೇದವ್ಯಾಸ ಕಾಮತ್, ಡಾ.ವೈ.ಭರತ್ ಶೆಟ್ಟಿ, ಮಾಜಿ ಸಚಿವ ಕೃಷ್ಣ ಜೆ.ಪಾಲೆಮಾರ್, ಕಾಪೆರೇಶನ್ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕಿ ಪಿ.ವಿ.ಭಾರತಿ, ಕರ್ಣಾಟಕ ಬ್ಯಾಂಕ್ ಮಹಾ ಪ್ರಬಂಧಕ ಬಿ.ಚಂದ್ರಶೇಖರ್, ಎಂಆರ್‍ಪಿಎಲ್-ಒಎನ್‍ಜಿಸಿ ಮಹಾಪ್ರಬಂಧಕ ಬಿ.ಎಚ್.ವಿ.ಪ್ರಸಾದ್, ಕರ್ಣಾಟಕ ಬ್ಯಾಂಕ್ ಸಾರ್ವಜನಿಕ ಸಂಪರ್ಕಾಧಿಕಾರಿ ಶ್ರೀನಿವಾಸ ದೇಶಪಾಂಡೆ, ಪತ್ರಕರ್ತೆ ಸಂಧ್ಯಾ ಎಸ್.ಪೈ, ಮತ್ತಿತರರು ಉಪಸ್ಥಿತರಿದ್ದರು. ಇನ್ನೂಮಂಗಳೂರು ಮಾತಾ ಅಮೃತಾನಂದಮಯಿ ಸೇವಾ ಸಮಿತಿ ಅಧ್ಯಕ್ಷ ಪ್ರಸಾದ್ ರಾಜ್ ಕಾಂಚನ್ ಸ್ವಾಗತಿಸಿದರು.

Related posts

Leave a Reply

Your email address will not be published. Required fields are marked *