Header Ads
Breaking News

ಮಂಗಳೂರಿನಲ್ಲಿ ಬಿ.ವೈ ವಿಜಯೇಂದ್ರ ಜನ್ಮ ದಿನಾಚರಣೆ ; ಕುತ್ತಾರು ಬಾಲಸಂರಕ್ಷಣಾ ಕೇಂದ್ರದಲ್ಲಿ ಆಚರಣೆ

ಸಂಸದ ಬಿ.ವೈ. ವಿಜಯೇಂದ್ರ ಅವರು ಕುತ್ತಾರ್‍ನಲ್ಲಿರುವ ಬಾಲಸಂರಕ್ಷಣಾ ಕೇಂದ್ರಕ್ಕೆ ಭೇಟಿ ನೀಡಿದರು. ರಾಜ್ಯ ಬಿಜೆಪಿ ಉಪಾಧ್ಯಕ್ಷರೂ ಆಗಿರುವ ವಿಜಯೇಂದ್ರ ಅವರು ಕೇಂದ್ರದಲ್ಲಿ ಗೋ ಪೂಜೆ ನಡೆಸಿ ಭಾರತ ಮಾತೆಗೆ ಪುಷ್ಪ ನಮನ ಸಲ್ಲಿಸಿದರು. ಬಳಿಕ ವಿಜಯೇಂದ್ರ ಅವರು ಆಶ್ರಮದಲ್ಲಿ ಮಕ್ಕಳೊಂದಿಗೆ ತಮ್ಮ ಜನ್ಮದಿನವನ್ನು ಆಚರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ”ಇತ್ತೀಚೆಗೆ ಶಿರಾದಲ್ಲಿ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಉಪಚುನಾವಣೆಯಲ್ಲಿ ಬಿಜೆಪಿಯು 25 ಸಾವಿರ ಮತಗಳ ಅಂತರದಿಂದ ಜಯಶಾಲಿಯಾಗಲಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಅವರ ಅಪೇಕ್ಷೆಯಂತೆ ಮೈಸೂರಿನಲ್ಲಿ ಸಂಘಟನೆ ಬಲಪಡಿಸಲು ಪಕ್ಷ ಒತ್ತು ನೀಡುತ್ತಿದೆ” ಎಂದು ತಿಳಿಸಿದರು. ಯಾವುದೇ ಪ್ರತಿಫಲ ನಿರೀಕ್ಷಿಸದೆ ಸೇವಾ ಕಾರ್ಯ ನಿರ್ವಹಿಸುತ್ತಿರುವ ಕುತ್ತಾರ್ ಆಶ್ರಮದ ಸಂಘಟಕರನ್ನು ಅವರು ಶ್ಲಾಘಿಸಿದರು.ಆಶ್ರಮದ ನಿರ್ವಾಹಕರಾದ ಅನಂತಕೃಷ್ಣ ಭಟ್, ಬಿಜೆಪಿ ಮುಖಂಡರುಗಳಾದ ಕಿಶೋರ್ ಕುಮಾರ್ ಪುತ್ತೂರು, ರವೀಂದ್ರ ಶೆಟ್ಟಿ ಉಳಿದೊಟ್ಟು, ಚಂದ್ರಹಾಸ್ ಪಂಡಿತ್ ಹೌಸ್, ಗೋಪಾಲ್ ಕುತ್ತಾರ್, ರಾಜೀವ್ ಮೈಸೂರು ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *