
ಮಂಗಳೂರಿನಲ್ಲಿ ಲಷ್ಕರ್ ಪರ ಗೋಡೆ ಬರಹ ಪ್ರಕರಣದ ಬಗ್ಗೆ ಈಗಾಗಲೇ ಸಂಬಂಧ ಪೊಲೀಸ್ರು ವಿಚಾರಣೆ ಮಾಡುತ್ತಿದ್ದಾರೆ. ಅತೀ ಶೀಘ್ರದಲ್ಲೇ ಆರೋಪಿಗಳನ್ನು ಬಂಧಿಸುವ ವಿಶ್ವಾಸವಿದೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದರು.
ಅವರು ಮಂಗಳೂರಿನಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದರು. ಅಂತರಾಷ್ಟ್ರೀಯ ಮಟ್ಟದ ಉಗ್ರವಾದ ಮಾಡುವವರ ಮಾದರಿ ಇದೇ ಆಗಿದೆ. ಹೆಚ್ಚೆಚ್ಚು ಗಲಭೆ, ಉಗ್ರರ ಕೃತ್ಯಗಳಾದ ಪ್ರದೇಶದಲ್ಲಿ ಈ ರೀತಿ ಗೋಡೆ ಬರಹ ಬರೆಯಲಾಗಿತ್ತು. ಕಾಶ್ಮೀರ, ಇರಾಕ್, ಇರಾನ್ ದೇಶದಲ್ಲೂ ಈ ರೀತಿ ಗೋಡೆ ಬರಹ ಬರೆಯಲಾಗಿತ್ತು. ಉಗ್ರರು ತಮ್ಮ ಕೃತ್ಯ ಮಾಡುವ ಮೊದಲು ಈ ರೀತಿ ಬರೆಯುತ್ತಾರೆ. ಇದೇ ರೀತಿಯ ಸಣ್ಣ ಪ್ರಯತ್ನ ಮಂಗಳೂರಿನಲ್ಲಿ ನಡೆದಿದೆ. ಈಗಾಗಲೇ ಪ್ರಕರಣ ಸಂಬಂಧ ಪೊಲೀಸ್ರು ವಿಚಾರಣೆ ಮಾಡುತ್ತಿದ್ದಾರೆ. ಅತೀ ಶೀಘ್ರದಲ್ಲೇ ಆರೋಪಿಗಳನ್ನು ಬಂಧಿಸುವ ವಿಶ್ವಾಸವಿದೆ ಎಂದು ಹೇಳಿದರು.