Header Ads
Breaking News

ಮಂಗಳೂರಿನ ಉರ್ವಸ್ಟ್ರೋರ್ ತುಳು ಭವನದಲ್ಲಿ ಯಕ್ಷಗಾನ ಮತ್ತು ಬ್ಯಾರಿ ಸಂಬಂಧ ವಿಚಾರ ಸಂಕಿರಣ

ಮಂಗಳೂರು : ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ವತಿಯಿಂದ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ವತಿಯಿಂದ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಇವುಗಳ ಸಹಯೋಗದೊಂದಿಗೆ ಯಕ್ಷಗಾನ ಮತ್ತು ಬ್ಯಾರಿ ಸಂಬಂಧ ಎಂಬ ವಿಷಯದ ಬಗ್ಗೆ ವಿಚಾರ ಸಂಕಿರಣ ತುಳು ಭವನದಲ್ಲಿ ಜರುಗಿತು.

ಕಾರ್ಯಕ್ರಮವನ್ನು ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ದಯಾನಂದ ಜಿ. ಕತ್ತಲ್‌ಸಾರ್ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ತುಳು ಮತ್ತು ಬ್ಯಾರಿ ಭಾಷೆಯ ಬಾಂಧವ್ಯ ಬೆಸೆಯಲು ಈ ಕಾರ್ಯಕ್ರಮ ಸಹಕಾರಿ, ಬಪ್ಪ ಬ್ಯಾರಿ ಸಾಹಿತ್ಯ ಕ್ಷೇತ್ರಕ್ಕೆ ನೀಡಿದ ಕೊಡುಗೆ ಅಪಾರ ಎಂದರು.
ಕಾರ್ಯಕ್ರಮ ವಹಿಸಿದ್ದ ಬ್ಯಾರಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ರಹೀಂ ಉಚ್ಚಿಲ್ ಅವರು ಮಾತನಾಡಿ, ಬ್ಯಾರಿ ಭಾಷೆ, ಸಾಹಿತ್ಯ ಸಂಸ್ಕೃತಿ ಉಳಿಸಲು ಅಕಾಡೆಮಿ ನಿರಂತರ ಶ್ರಮಿಸುತ್ತಿದೆ. ಐತಿಹಾಸಿಕ ಗ್ರಂಥ, ಶಬ್ದಕೋಶವನ್ನು ಬಿಡುಗಡೆ ಮಾಡಲಾಗುವುದು ಎಂದರು.
ಸಂಪನ್ಮೂಲ ವ್ಯಕ್ತಿಯಾಗಿದ್ದ ಯಕ್ಷಗಾನ ಕಲಾವಿದ ಜಬ್ಬಾರ್ ಸಮೋ ಅವರು ಯಕ್ಷಗಾನ ಮತ್ತು ಬ್ಯಾರಿ  ಸಂಬಂದ ಎಂಬ ವಿಷಯದ ಬಗ್ಗೆ ವಿಚಾರ ಸಂಕಿರಣ ನೆರವೇರಿಸಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರಾಜೇಶ್ ಜಿ. ಅವರು, ಬೆಲ್ಕಿರಿ ದೈಮಾಸಿಕ ಬಿಡುಗಡೆಗೊಳಿಸಿದರು. ಇದೇ ವೇಳೆ ಯಕ್ಷಗಾನ ಕಲಾವಿದ ಜಬ್ಬಾರ್ ಸಮೋ ಅವರನ್ನು ಸನ್ಮಾನಿಸಲಾಯಿತು.
ಮುಖ್ಯ ಅತಿಥಿಗಳಾಗಿ ಸಾಹಿತಿ ಅಬ್ದುಲ್ ರೆಹ್ಮಾನ್ ಕುತ್ತೆತ್ತೂರು, ಬ್ಯಾರಿ ಸಾಹಿತ್ಯ ಅಕಾಡೆಮಿಯ ರಿಜಿಸ್ಟ್ರಾರ್ ಪೂರ್ಣಿಮಾ, ರಾಜ್ಯ ಬ್ಯಾರಿ ಸಾಹಿತ್ಯ ಅಕಾಡೆಮಿಯ ಸದಸ್ಯರಾದ ಚಂಚಲಾಕ್ಷಿ, ಸುರೇಖಾ, ತುಳು ಸಾಹಿತ್ಯ ಅಕಾಡೆಮಿ ಸದಸ್ಯ ಚೇತಕ್ ಪೂಜಾರಿ,ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಸದಸ್ಯರಾದ ಶಂಶೀರ್ ಬುಡೋಳಿ ಉಪಸ್ಥಿತರಿದ್ದರು.
ಕಾರ್ಯಕ್ರಮದ ಕೊನೆಯಲ್ಲಿ ಗಿರೀಶ್ ರೈ ಕಕ್ಕೆಪದವು ಬಳಗದಿಂದ ಬಪ್ಪ ಬ್ಯಾರಿ ಬಗ್ಗೆ ಕಿರು ಯಕ್ಷಗಾನ ಪ್ರದರ್ಶನ ನಡೆಯಿತು.

Related posts

Leave a Reply

Your email address will not be published. Required fields are marked *