
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ರಂಗ ಚಾವಡಿ ಮಂಗಳೂರು ಆಶ್ರಯದಲ್ಲಿ ರಂಗಚಾವಡಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಅಕಾಡೆಮಿಯ ತುಳುಭವನದಲ್ಲಿ ನಡೆಯಿತು.ಕಾರ್ಯಕ್ರಮವನ್ನು ಸುರೇಶ್ ಶೆಟ್ಟಿ ಗುರ್ಮೆ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಮನುಷ್ಯ ಬೆಳೆಯ ಬೇಕಾದರೆ ಪ್ರೋತ್ಸಾಹ ಅಗತ್ಯ. ಸಾಧಕರಿಗೆ ಪ್ರೋತ್ಸಾಹ ನೀಡುವ ಕೆಲಸ ಆಗಬೇಕೆಂದು ಹೇಳಿದರು.ಇದೇ ವೇಳೆ ಸಂಗೀತ ನಿರ್ದೇಶಕ ಮುರಳೀಧರ್ ಕಾಮತ್ ಅವರಿಗೆ ರಂಗಚಾವಡಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಈ ಸಂದರ್ಭ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ದಯಾನಂದ್ ಕತ್ತಲ್ಸಾರ್ ಮತ್ತಿತರರು ಉಪಸ್ಥಿತರಿದ್ದರು.