Header Ads
Header Ads
Breaking News

ಮಂಗಳೂರಿನ ಪಂಪ್‌ವೆಲ್, ತೊಕ್ಕೊಟ್ಟು ಮೇಲ್ಸೇತುವೆ ಕಾಮಗಾರಿ ಪೂರ್ಣಗೊಳಿಸಲು ಆಗ್ರಹಿಸಿ:ಸಾಮೂಹಿಕ ಧರಣಿ

ಮಂಗಳೂರಿನ ಪಂಪ್‌ವೆಲ್, ತೊಕ್ಕೊಟ್ಟು ಮೇಲ್ಸೇತುವೆ ಕಾಮಗಾರಿ ಪೂರ್ಣಗೊಳಿಸಲು ಆಗ್ರಹಿಸಿ, ಪಂಪುವೆಲ್ ಮೇಲ್ಸೇತುವೆ ಹೋರಾಟ ಸಮಿತಿ ನೇತೃತ್ವದಲ್ಲಿ ಸಾಮೂಹಿಕ ಧರಣಿ ನಡೆಯ್ತು, ನಗರದ ಪಂಪ್‌ವೆಲ್ ಜಂಕ್ಷನ್‌ನಲ್ಲಿ ನಡೆದ ಪ್ರತಿಭಟನೆಗೆ ರಿಕ್ಷಾ ಸಂಘದ ಚಾಲಕರು, ಬಸ್ ಮಾಲಕರ ಸಂಘ ಸೇರಿದಂತೆ ವಿವಿಧ ಸಂಘಟನೆಗಳು ಸಾಥ್ ಕೊಟ್ಟರು. ಪಂಪವೆಲ್ , ತೊಕ್ಕೂಟ್ಟು ಮೇಲ್ಸೇತುವೆ ಕಾಮಗಾರಿಯನ್ನು ಕೂಡಲೇ ಪೂರ್ಣಗೊಳಿಸಬೇಕು. ಸರ್ವಿಸ್ ರಸ್ತೆಗಳ ನಿರ್ಮಾಣ, ನಂತೂರು ಮೇಲ್ಸೇತುವೆ ನಿರ್ಮಾನ ಹೆದ್ದಾರಿ ಅವ್ಯವಸ್ಥೆಗಳನ್ನ ಸರಿಪಡಿಸಬೇಕು. ಕಾಮಗಾರಿ ಪೂರ್ಣಗೊಳ್ಳದೆ ಯಾವುದೇ ಕಾರಣಕ್ಕೂ ಟೋಲ್ ಸಂಗ್ರಹ ನಡೆಸಬಾರದು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಈ ವೇಳೆ ಡಿವೈಎಫ್‌ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ, ಪಂಪ್‌ವೆಲ್ ಮೇಲ್ಸೇತುವೆ ಹೋರಾಟ ಸಮಿತಿ ಸಂಚಾಲಕರಾದ ಸುನೀಲ್ ಕುಮಾರ್ ಬಜಾಲ್, ಸಾಮಾಜಿಕ ಹೋರಾಟಗಾರ ಎಂ.ಜಿ.ಹೆಗಡೆ, ನಾಗರಿಕ ಹಿತರಕ್ಷಣಾ ವೇದಿಕೆ ಅಧ್ಯಕ್ಷ ಹನುಮಂತ್ ಕಾಮತ್, ಪಾಲಿಕೆ ಸದಸ್ಯ ಪ್ರವೀಣ್ ಚಂದ್ರ ಅಳ್ವ ಸೇರಿದಂತೆ ಇನ್ನಿತರರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ರು.

Related posts

Leave a Reply