
ಸ್ಮಾರ್ಟ್ಸಿಟಿ ಯೋಜನೆಯಲ್ಲಿ 45 ಲಕ್ಷ ರೂಪಾಯಿ ವೆಚ್ಚದಲ್ಲಿ ಪಾಂಡೇಶ್ವರ ಪೊಲೀಸ್ ಠಾಣೆಗೆ ನಿರ್ಮಾಣಗೊಂಡ ಕಾಂಕ್ರೀಟ್ ರಸ್ತೆಯನ್ನು ಮಂಗಳೂರು ಪಾಲಿಕೆಯ ಮೇಯರ್ ದಿವಾಕರ್ ಪಾಂಡೇಶ್ವರದ ಉದ್ಘಾಟಿಸಿದರು.
ಇದೇ ವೇಳೆ ಮಾತನಾಡಿದ ಅವರು, ಠಾಣೆಗೆ ನೀರಿನ ಟ್ಯಾಂಕ್ ವಿಶ್ರಾಂತಿ ಕೊಠಡಿಗಳ ನಿರ್ಮಾಣ ಆಗಲಿದ್ದು, ನ್ಯಾಯಾಲಯದ ಆದೇಶದಿಂದ ಕಾಮಗಾರಿ ಸ್ಥಗಿತಗೊಂಡ ಕಾರಣ ವಿಳಂಬವಾಗಿದೆ ಎಂದರು.
ಅನಂತರ ಮಂಗಳೂರು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಮಾತನಾಡಿ, ಪಾಂಡೇಶ್ವರ ಪೊಲೀಸ್ ಠಾಣೆ ಆವರಣದಲ್ಲಿ ಎಸಿಪಿ ಕಚೇರಿ, ಮಹಿಳಾ ಠಾಣೆ, ಸಂಚಾರ ವಿಭಾಗಗಳಿದ್ದು, ಸುಮಾರು 250ರಷ್ಟು ಸಿಬ್ಬಂದಿ ಕೆಲಸ ಮಾಡುತ್ತಿದ್ದಾರೆ. ಇಲ್ಲಿಗೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು ಕಾಂಕ್ರೀಟಿಕರಣಗೊಳಿಸಲು ಕಾರಣರಾದ ಜನಪ್ರತಿನಿಧಿಗಳಿಗೆ ಕೃತಜ್ಞತೆ ಎಂದು ಹೇಳಿದರು.
ಈ ಸಂದರ್ಭ ಮಂಗಳೂರು ಪಾಲಿಕೆಯ ಮುಖ್ಯ ಸಚೇತಕ ಪ್ರೇಮಾನಂದ ಶೆಟ್ಟಿ, ಸದಸ್ಯರಾದ ಜಗದೀಶ್ ಶೆಟ್ಟಿ, ಅಬ್ದುಲ್ ಲತೀಫ್, ಡಿಸಿಪಿ ಹರಿರಾಂ ಶಂಕರ್, ಎಸಿಪಿ ನಟರಾಜ್, ಇನ್ಸ್ಪೆಕ್ಟರ್ಗಳಾದ ಗೋಪಾಲಕೃಷ್ಣ ಭಟ್ ಮತ್ತಿತರರು ಉಪಸ್ಥಿತರಿದ್ದರು.