Header Ads
Header Ads
Header Ads
Header Ads
Header Ads
Header Ads
Breaking News

ಮಂಗಳೂರಿನ ಬಂಟ್ಸ್ ಹಾಸ್ಟೆಲ್‌ನ ಶ್ರೀ ರಾಮಕೃಷ್ಣ ಕಾಲೇಜಿನಲ್ಲಿ ನಡೆದ ರೋಟರ್‍ಯಾಕ್ಟ್ ಕ್ಲಬ್, ಇಂಟರ್‍ಯಾಕ್ಟ್ ಕ್ಲಬ್‌ನ ಇನ್ಸ್ಟಾಲೇಶನ್ ಕಾರ್ಯಕ್ರಮ

ಮಂಗಳೂರಿನ ಬಂಟ್ಸ್ ಹಾಸ್ಟೆಲ್‌ನಲ್ಲಿರುವ ಶ್ರೀ ರಾಮಕೃಷ್ಣ ಕಾಲೇಜಿನಲ್ಲಿ ರೋಟರಿ ಕ್ಲಬ್ ಮಂಗಳೂರು ಪೂರ್ವ ಇದರ ಸಹಭಾಗಿತ್ವದಲ್ಲಿ ರೋಟರ್‍ಯಾಕ್ಟ್ ಕ್ಲಬ್ ಆಂಡ್ ಇಂಟರ್‍ಯಾಕ್ಟ್ ಕ್ಲಬ್‌ನ ಇನ್ಸ್ಟಾಲೇಶನ್ ಕಾರ್ಯಕ್ರಮ ನಡೆಯಿತು.
ರಾಮಕೃಷ್ಣ ಕಾಲೇಜಿನ ಆಡಳಿತ ಮಂಡಳಿಯ ಸಂಚಾಲಕರಾದ ಕೃಷ್ಣ ಪ್ರಸಾದ್ ರೈ ಅವರು ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದ್ರು. ಬಳಿಕ ಮಾತನಾಡಿದ ಅವರು, ರೋಟರ್‍ಯಾಕ್ಟ್ ಕ್ಲಬ್ ಹಾಗೂ ಇಂಟರ್‍ಯಾಕ್ಟ್ ಕ್ಲಬ್‌ನ ಮಹತ್ವದ ಬಗೆಗಿನ ಮಾಹಿತಿ ನೀಡಿದ್ರು.
ಬಳಿಕ ಕಾರ್ಯಕ್ರಮದಲ್ಲಿ ಶ್ರೀ ರಾಮಕೃಷ್ಣ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಬಾಲಕೃಷ್ಣ ಶೆಟ್ಟಿ ಮಾತನಾಡಿ, ಇಂದಿನ ಕಾಲದಲ್ಲಿ ವಿದ್ಯಾರ್ಥಿಗಳಿಗೆ ಬೇರೆ ಬೇರೆ ರೀತಿಯ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಅವಕಾಶವಿದೆ. ಆದ್ರೆ ಹಿಂದಿನ ಕಾಲದಲ್ಲಿ ಇಂತಹ ಸೌಲಭ್ಯಗಳು ಇರಲಿಲ್ಲ. ಆದ್ದರಿಂದ ಇಂದಿನ ವಿದ್ಯಾರ್ಥಿಗಳೇ ಅದೃಷ್ಟವಂತರು ಅಂತ ಹೇಳಿದ್ರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೋಟರಿ ಕ್ಲಬ್ ಮಂಗಳೂರು ಪೂರ್ವದ ಅಧ್ಯಕ್ಷ ರೋಟರಿಯನ್ ರಮಾನಾಥ್ ಶೆಟ್ಟಿ ವಹಿಸಿದ್ರು. ಈ ಸಂದರ್ಭ ಮಾತನಾಡಿದ ಅವರು, ರೋಟರ್‍ಯಾಕ್ಟ್ ಕ್ಲಬ್ ಹಾಗೂ ಇಂಟರ್‍ಯಾಕ್ಟ್ ಕ್ಲಬ್‌ನ ಮೂಲಕ ಸಾಕಷ್ಟು ಉತ್ತಮ ಯೋಜನೆಗಳನ್ನು ಹಾಕುವ ಮೂಲಕ ಯುವಕರು ಸಮಾಜಕ್ಕೆ ಮಹತ್ತರ ಕೊಡುಗೆ ನಿಡುವಂತಾಗಲಿ ಅಂತ ಶುಭ ಹಾರೈಸಿದ್ರು.
ಬಳಿಕ ಅಧಿಕಾರ ಹಸ್ತಾಂತರ ಕಾರ್ಯಕ್ರಮ ನಡೆಯಿತು. ರೋಟರ್‍ಯಾಕ್ಟ್ ಕ್ಲಬ್‌ನ ನೂತನ ಅಧ್ಯಕ್ಷರಾದ ಅಭಿಷೇಕ್ ಅವರಿಗೆ ಮಾಜಿ ಅಧ್ಯಕ್ಷ ಶೇಷಾದ್ರಿ ಅಧಿಕಾರ ಹಸ್ತಾಂತರ ಮಾಡಿದ್ರು. ಇನ್ನು ಇಂಟರ್‍ಯಾಕ್ಟ್ ಕ್ಲಬ್‌ನ ನೂತನ ಅಧ್ಯಕ್ಷರಾದ ಚೇತನ್ ಪೂಜಾರಿಯವರಿಗೆ ಮಾಜಿ ಅಧ್ಯಕ್ಷೆ ಫಾತಿಮಾ ಅಧಿಕಾರ ಹಸ್ತಾಂತರಿದ್ರು.
ಯೂತ್ ಸರ್ವೀಸ್ ರೋಟರಿ ಕ್ಲಬ್‌ನ ಅಧ್ಯಕ್ಷ ರೋಟರಿಯನ್ ಅಶ್ವತ್ಥಾಮ ಹೆಗ್ಡೆ, ಶ್ರೀ ರಾಮಕೃಷ್ಣ ಪಿಯು ಕಾಲೇಜಿನ ಪ್ರಾಂಶುಪಾಲರಾದ ಡಾ. ಕಿಶೋರ್ ಕುಮಾರ್ ರೈ, ಇಂಟರ್‍ಯಾಕ್ಟ್ ಕ್ಲಬ್‌ನ ಇನ್‌ಚಾರ್ಜ್ ಅನಿತಾ ಅವಾಧಾನಿ, ರೋಟರ್‍ಯಾಕ್ಟ್ ಕ್ಲಬ್‌ನ ಪ್ರೆಸಿಡೆಂಟ್ ಶರೀಫ್, ಇಂಟರ್‍ಯಾಕ್ಟ್ ಕ್ಲಬ್‌ನ ಚೇತನ್ ಪೂಜಾರಿ, ಕಾಲೇಜಿನ ಎಲ್ಲಾ ಸಿಬ್ಬಂದಿ ಹಾಗೂ ಶಿಕ್ಷಕರು ಉಪಸ್ಥಿತರಿದ್ರು..

Related posts

Leave a Reply

Your email address will not be published. Required fields are marked *