Header Ads
Breaking News

ಮಂಗಳೂರಿನ ಶ್ರೀನಿವಾಸ್ ವಿಶ್ವವಿದ್ಯಾಲಯದ ಘಟಿಕೋತ್ಸವ : ಶ್ರೀ ವಿದ್ಯಾಧೀಶತೀರ್ಥ ಸ್ವಾಮಿಜಿಯವರಿಗೆ ಡಾಕ್ಟರೇಟ್ ಪದವಿ ಪ್ರದಾನ

ಶ್ರೀನಿವಾಸ್ ವಿಶ್ವವಿದ್ಯಾಲಯವು ಉಡುಪಿಯ ಪಲಿಮಾರು ಮಠದ ಶ್ರೀ ವಿದ್ಯಾಧೀಶ ತೀರ್ಥ ಸ್ವಾಮಿಜಿಯವರಿಗೆ ವೇದಿಕ್ ಸೈನ್ಸ್ & ದ್ವೈತ ವೇದಾಂತದಲ್ಲಿ ಗೌರವ ಡಾಕ್ಟರೇಟ್ ಪದವಿಯನ್ನು ವಿಶ್ವವಿದ್ಯಾಲಯದ ಸಿಟಿ ಕ್ಯಾಂಪಸ್‍ನಲ್ಲಿ ಆಯೋಜಿಸಿದ 2ನೇ ವಾರ್ಷಿಕ ಘಟಿಕೋತ್ಸವದಲ್ಲಿ ನೀಡಿ ಸನ್ಮಾನಿಸಲಾಯಿತು.

ಪದವಿಯನ್ನು ಸ್ವೀಕರಿಸಿ ಮಾತನಾಡಿದ ಅವರು ಶ್ರೀನಿವಾಸ ಎಂಬ ಹೆಸರಿಗೂ ನನಗೂ ಅವಿನಾಭಾವ ಸಂಬಂಧವಿದೆ. ನಾನು ಚಿಕ್ಕವನಿದ್ದಾಗ ನನ್ನ ಅಮ್ಮ ಶ್ರೀನಿವಾಸನಿಗೆ ಹರಕೆಯನ್ನು ಹೊತ್ತಿದ್ದರು, ಅದರಂತೆ ನನಗೆ ಉಪನಯನವನ್ನೂ ಅಲ್ಲೇ ಮಾಡಿಸಿದರು. ಇದೀಗ ಶ್ರೀನಿವಾಸ್ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪ್ರಶಸ್ತಿಯನ್ನು ಪಡೆಯುತ್ತಿರುವುದು ವಿಶೇಷ ಹಾಗೂ ಸಂತಸದ ವಿಚಾರ ಎಂದರು.

ಶ್ರೀನಿವಾಸ್ ವಿಶ್ವವಿದ್ಯಾಲಯದ ಕುಲಾಧಿಪತಿ ಶ್ರೀ ಸಿಎ. ಎ. ರಾಘವೇಂದ್ರ ರಾವ್‍ರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಭಕ್ತರಿಗೆ ನಗುಮುಖದಿಂದ ಜನರಿಗೆ ಸೇವೆಯನ್ನು ನೀಡುತ್ತಾ ಬರುವ ಸ್ವಾಮಿಜಿಗಳು ಶ್ರೀನಿವಾಸ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪದವಿಯನ್ನು ಸ್ವೀಕರಿಸಿರುವುದು ನಮಗೆ ಹೆಮ್ಮೆಯ ವಿಚಾರ ಎಂದರು.

ಕಾರ್ಯಕ್ರಮದಲ್ಲಿ ಶ್ರೀನಿವಾಸ್ ವಿಶ್ವವಿದ್ಯಾಲಯದ ಸಹ ಕುಲಾಧಿಪತಿ ಡಾ. ಎ. ಶ್ರೀನಿವಾಸ್ ರಾವ್, ಕುಲಪತಿ ಡಾ. ಪಿ.ಎಸ್. ಐತಾಳ್, ಆಡಳಿತ ಮಂಡಳಿಯ ಟ್ರಸ್ಟಿ ಸದಸ್ಯರುಗಳಾದ ಶ್ರೀಮತಿ ವಿಜಯಲಕ್ಷ್ಮಿ ಆರ್. ರಾವ್, ಪ್ರೊ. ಎ. ಮಿತ್ರಾ ಎಸ್. ರಾವ್, ಕುಲಸಚಿವರುಗಳಾದ ಡಾ. ಅನಿಲ್ ಕುಮಾರ್, ಡಾ. ಶ್ರೀನಿವಾಸ್ ಮಯ್ಯ (ಮೌಲ್ಯಮಾಪನ), ಡಾ. ಅಜಯ್ ಕುಮಾರ್ (ಅಭಿವೃದ್ಧಿ), ಆದಿತ್ಯ ಕುಮಾರ್ (ಶೈಕ್ಷಣಿಕ ಮತ್ತು ಅಭಿವೃದ್ಧಿ) ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *