Header Ads
Breaking News

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬಾಂಬ್ ಪತ್ತೆ ಪ್ರಕರಣ ಉನ್ನತ ಮಟ್ಟದ ತನಿಖೆ ಆರಂಭ : ಪೊಲೀಸ್ ಆಯುಕ್ತ ಹರ್ಷ ಹೇಳಿಕೆ

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ಉನ್ನತ ಮಟ್ಟದ ತನಿಖೆ ಆರಂಭಿಸಲಾಗಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತರಾದ ಡಾ.ಪಿ.ಎಸ್.ಹರ್ಷ ಮಾಹಿತಿಯನ್ನು ನೀಡಿದ್ದರು. 

ತನಿಖಾ ತಂಡ ಸಾಕಷ್ಟು ಪ್ರಗತಿಯನ್ನು ಸಾಧಿಸಿದೆ. ಈ ಕುರಿತು ಅನುಮಾನಸ್ಪದವಾದ ವ್ಯಕ್ತಿಗಳನ್ನು ವಿಚಾರಣೆ ಮಾಡಲಾಗಿದೆ. ಶಂಕಿತರ ಪತ್ತೆಗೆ ಎಲ್ಲಾ ರೀತಿಯ ಕ್ರಮವನ್ನು ವಹಿಸಲಾಗಿದೆ. ಬಾಂಬ್ ನ ಅವಶೇಷಗಳನ್ನು ಸಂಗ್ರಹಿಸಿ ವಿಧಿ- ವಿಜ್ಞಾನ ಪ್ರಯೋಗಲಯಕ್ಕೆ ಕಳುಹಿಸಲಾಗಿದೆ. ಆದಷ್ಟು ಬೇಗ ಆರೋಪಿಗಳನ್ನು ಪತ್ತೆ ಮಾಡಲಾಗುವುದು ಎಂದು ತಿಳಿಸಿದ್ದರು. ಈಗಾಗಲೇ ಆರೋಪಿಗಳ ಪತ್ತೆಗೆ 3 ತನಿಖಾ ತಂಡಗಳನ್ನು ರಚಿಸಲಾಗಿದ್ದು, ಸಿಸಿಬಿ ಡಿಸಿಪಿ ಲಕ್ಷ್ಮೀ ಗಣೇಶ್ ನೇತೃತ್ವದ ಎಸಿಪಿ ಬೆಳ್ಳಿಯಪ್ಪ ಆಂಡ್ ಟೀಂ ಮತ್ತು ಮಂಗಳೂರು ಉತ್ತರ ವಿಭಾಗದ ಎಸಿಪಿ ಶಿವಪ್ರಸಾದ್ ನಾಯಕ್ ಮತ್ತು ತಂಡ ಈಗಾಗಲೇ ಹಲವು ಆಯಾಮಗಳಲ್ಲಿ ತನಿಖೆ ಆರಂಭಿಸಿದೆ ಎಂದು ಸುದ್ದಿಗಾರರಿಗೆ ಮಾಹಿತಿಯನ್ನು ನೀಡಿದ್ದರು.

Related posts

Leave a Reply

Your email address will not be published. Required fields are marked *