Header Ads
Breaking News

ಮಂಗಳೂರು ಮಹಾನಗರ ಪಾಲಿಕೆಯಿಂದ ಪೌರಕಾರ್ಮಿಕರ ದಿನಾಚರಣೆ

ಮಂಗಳೂರು ಮಹಾನಗರ ಪಾಲಿಕೆಯ ವತಿಯಿಂದ ಪೌರಕಾರ್ಮಿಕರ ದಿನವನ್ನು ಆಚರಿಸಲಾಯಿತು. ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಕೋವಿಡ್ ಮುನ್ನೆಚ್ಚರಿಕೆಗಳ ಜೊತೆಗೆ ಸರಳವಾಗಿ ಕಾರ್ಯಕ್ರಮವನ್ನು ಆಚರಿಸಲಾಯಿತು. ಕಾರ್ಯಕ್ರಮವನ್ನು ಪಾಲಿಕೆ ಮೇಯರ್ ದಿವಾಕರ್ ಪಾಂಡೇಶ್ವರ ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್ ಅವರು, ಪೌರಕಾರ್ಮಿಕರ ಸೇವೆ ನಿಜಕ್ಕೂ ಬೆಲೆ ಕಟ್ಟಲಾಗದ್ದು. ಅದರಲ್ಲೂ ಕೋವಿಡ್ ಸಮಯದಲ್ಲಿ ಎಷ್ಟೇ ಅಪಾಯವಿದ್ದರೂ ಅದನ್ನು ಲೆಕ್ಕಿಸದೆ ಪ್ರತೀದಿನ ನಿಷ್ಠೆಯಿಂದ ಸೇವೆ ಸಲ್ಲಿಸಿದ್ದಾರೆ. ಅವರ ಸೇವೆಗೆ ಎಷ್ಟು ಅಭಿನಂದನೆಗಳನ್ನು ಅರ್ಪಿಸಿದರೂ ಕಡಿಮೆ ಎಂದು ಹೇಳಿದರು. ಇದೇ ವೇಳೆ ಅತ್ಯುತ್ತಮವಾಗಿ ಸೇವೆ ಸಲ್ಲಿಸಿದ ಪೌರಕಾರ್ಮಿಕರನ್ನು ಸನ್ಮಾನಿಸಿ, ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಪಾಲಿಕೆ ಸದಸ್ಯರು, ಅಧಿಕಾರಿಗಳು ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *