Header Ads
Header Ads
Breaking News

ಮಂಗಳೂರು ಮಹಾನಗರ ಪಾಲಿಕೆ ಚುನಾವಣೆ ಹಿನ್ನೆಲೆ : ಕಾಂಗ್ರೆಸ್ ಅಭ್ಯರ್ಥಿ ಚಂದ್ರಿಕಾರಿಂದ ಮತಪ್ರಚಾರ

ಮಂಗಳೂರು ಮಹಾನಗರ ಪಾಲಿಕೆಯ ಚುನಾವಣೆಗೆ ರಾಜಕೀಯ ಪಕ್ಷಗಳು ಬಿರುಸಿನಿಂದ ಮತಪ್ರಚಾರದಲ್ಲಿ ತೊಡಗಿಕೊಂಡಿದ್ದಾರೆ. ಪಣಂಬೂರು-ಬೆಂಗ್ರೆ ವಾರ್ಡಿನ ಕಾಂಗ್ರೆಸ್ ಅಭ್ಯರ್ಥಿ ಚಂದ್ರಿಕಾ ಅವರು ಮೀನಕಳ್ಯ, ಕೂರಿಕಟ್ಟದಲ್ಲಿ ಮತಪ್ರಚಾರದಲ್ಲಿ ತೊಡಗಿಕೊಂಡರು. ಅವರಿಗೆ ಮಾಜಿ ಸಚಿವ ರಮಾನಾಥ ರೈ ಸಹಿತ ಕಾಂಗ್ರೆಸ್ ಮುಖಂಡರು ಸಾಥ್ ನೀಡಿದರು.
ಮಂಗಳೂರು ಮಹಾನಗರ ಪಾಲಿಕೆಯ 11ನೇ ಪಣಂಬೂರು-ಬೆಂಗ್ರೆ ವಾರ್ಡಿನ ಚಂದ್ರಿಕಾ ಅವರು ಈ ಬಾರಿಯ ಚುನಾವಣಾ ಕಣಕ್ಕೆ ಇಳಿದಿದ್ದು, ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಲಿದ್ದಾರೆ. ಸದಾ ಸಾಮಾಜಿಕ ಕ್ಷೇತ್ರದಲ್ಲಿ ತೊಡಗಿಕೊಂಡಿದ್ದು, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಡಿಯಲ್ಲಿ ಕಾರ್ಯದರ್ಶಿಯಾಗಿದ್ದು, ಡಿಎಸ್‍ಎಸ್ ಮೊಗೇರ ಸಂಘ ಮತ್ತು ಮಹಿಳಾ ಸಂಘದಲ್ಲಿ ತೊಡಗಿಕೊಂಡು ಸಕ್ರೀಯರಾಗಿದ್ದಾರೆ. ಇದೀಗ ಮಂಗಳೂರು ಮಹಾನಗರ ಪಾಲಿಕೆಯ ಪಣಂಬೂರು ಬೆಂಗ್ರೆ ವಾರ್ಡಿನಿಂದ ಸ್ಪರ್ಧಿಸಿದ್ದು, ಇಂದು ಮೀನಕಳ್ಯ, ಕೂರಿಕಟ್ಟದಲ್ಲಿ ಬಿರುಸಿನಿಂದ ಮತಯಾಚನೆ ಮಾಡಿದರು.
ಈ ಸಂದರ್ಭ ಮಾತನಾಡಿದ ಮಾಜಿ ಸಚಿವ ರಮಾನಾಥ ರೈ ಅವರು ಕಾಂಗ್ರೆಸ್‍ನ ಆಡಳಿತವನ್ನು ಮೆಚ್ಚಿ ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್‍ನ ಅಭ್ಯರ್ಥಿಗಳನ್ನು ಜನತೆ ಗೆಲ್ಲಿಸಲಿದ್ದಾರೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.ಆನಂತರ ಅಭ್ಯರ್ಥಿ ಚಂದ್ರಕಾ ಅವರು ಮಾತನಾಡಿ, ಪಣಂಬೂರು-ಬೆಂಗ್ರೆ ವಾರ್ಡಿನ ಸಂಪೂರ್ಣ ಅಭಿವೃದ್ಧಿಗೆ ಒತ್ತು ನೀಡಲಿದ್ದು, ಮತದಾರರ ಪ್ರೀತಿ, ವಿಶ್ವಾಸ ಹಾಗೂ ನಂಬಿಕೆಗೆ ಚ್ಯುತಿ ಬಾರದಂತೆ ನಡೆದುಕೊಂಡು ಬಂದು ಸದಾ ಜನರ ಸೇವೆಯನ್ನು ಮಾಡಲು ಸಿದ್ಧನಿದ್ದೇನೆ ಅದಕ್ಕಾಗಿ ನಿಮ್ಮೆಲ್ಲರ ಸಹಕಾರದ ಅವಶ್ಯಕತೆ ಇದೆ ಎಂದು ಹೇಳಿದರು.

ಈ ಸಂದರ್ಭ ಸ್ಥಳೀಯರೊಬ್ಬರು ಮಾತನಾಡಿ ವಾರ್ಡಿನ ಸಮಸ್ಯೆಗಳನ್ನು ಮುಂದಿಟ್ಟರು. ಈ ಸಂದರ್ಭ ಕಾಂಗ್ರೆಸ್‍ನ ಕಾರ್ಯಕರ್ತರಾದ ಪ್ರಸಾದ್ ರಾಜ್ ಕಾಂಚನ್, ಸಹಿತ ಇತರ ಕಾಂಗ್ರೆಸ್‍ನ ಮುಖಂಡರು ಹಾಜರಿದ್ದರು.

Related posts

Leave a Reply

Your email address will not be published. Required fields are marked *