Header Ads
Header Ads
Header Ads
Breaking News

ಮಂಗಳೂರು ಮಹಾನಗರ ಪಾಲಿಕೆ ಚುನಾವಣೆಗೆ ಕ್ಷಣಗಣನೆ : ಇಂದು ರೊಜಾರಿಯೋ ಶಾಲೆಯಲ್ಲಿ ನಡೆದ ಮಸ್ಟರಿಂಗ್ ಕಾರ್ಯ

ಮಂಗಳೂರು ಮಹಾನಗರ ಪಾಲಿಕೆ ಚುನಾವಣೆಗೆ ಕ್ಷಣಗಣನೆ ಶುರುವಾಗಿದ್ದು. ದಕ್ಷಿಣ ಕನ್ನಡ ಜಿಲ್ಲಾಡಳಿತ ಸಕಲ ಸಿದ್ಧತೆಯಿಂದ ಸನ್ನದ್ಧವಾಗಿ ನಿಂತಿದೆ. ಈ ಹಿನ್ನಲೆಯಲ್ಲಿ ಇಂದು ಬೆಳಿಗ್ಗೆ ಮಸ್ಟರಿಂಗ್ ಕಾರ್ಯ ಮಂಗಳೂರಿನ ರೊಜಾರಿಯೋ ಶಾಲೆಯಲ್ಲಿ ನಡೆಯಿತು.

ನಾಳೆ ಮಂಗಳೂರು ಮಹಾನಗರ ಪಾಲಿಕೆ ಚುನಾವಣೆನಡೆಯಲಿದ್ದು ಈ ಹಿನ್ನಲೆಯಲ್ಲಿ ಮತ ಪಟ್ಟಿಗೆಯ ಹಂಚಿಕೆ ಕಾರ್ಯ ಬಿಗಿ ಪೊಲೀಸ್ ಭದ್ರತೆಯೊಂದಿಗೆ ಚುನಾವಣಾಧಿಕಾರಿಗಳ ಸಮ್ಮುಖದಲ್ಲಿ ನಗರದ ರಿಜಾರಿಯೋ ಶಾಲೆಯಲ್ಲಿ ನಡೆಸಲಾಯಿತು.ಈ ಸಂದರ್ಭ ಜಿಲ್ಲಾಧಿಕಾರಿ ಸಿಂಧೂ.ಬಿ.ರೂಪೇಶ್ ಎಲ್ಲಾ ಕಾರ್ಯಗಳ ಪರಿಶೀಲಿಸಿ ಮಾತನಾಡಿ ಪಾಲಿಕೆ ಚುನಾವಣಾ ವಿಚಾರದಲ್ಲಿ ಸಕಲ ಸಿದ್ದತೆ ಮಾಡಲಾಗಿದೆ. ಇಲ್ಲಿ ಚುನಾವಣಾ ಕಾರ್ಯಕ್ಕಾಗಿ ಬಂದಿರುವ ಪ್ರತಿಯೊಬ್ಬರಿಗೂ ಯಾವುದೇ ರೀತಿಯ ಗೊಂದಲವಾಗದ ರೀತಿಯಲ್ಲಿ ಮಾಹಿತಿ ನೀಡಲು ಅಧಿಕಾರಿಗಳನ್ನು ಕೂಡ ನಿಯೋಜಿಸಿದ್ದೇವೆ. ಇಂದು ಮಂದ್ಯಾಹ್ನ ಅಧಿಕಾರಿಗಳ ತಂಡದೊಂದಿಗೆ ಅವರವರಿಗೆ ನೀಡಲಾಗ ಮತಗಟ್ಟೆಗಳಿಗೆ ತೆರಳಲಿದ್ದಾರೆ ಎಂದು ಹೇಳಿದರು.
ಬಳಿಕ ಮಂಗಳೂರು ಮಹಾನಗರ ಪಾಲಿಕೆ ಜಂಟಿ ಆಯುಕ್ತೆ ಗಾಯತ್ರಿ ನಾಯಕ್ ಮಾತನಾಡಿ ನಾಳೆ ನಡೆಯಲಿರುವ ಪಾಲಿಕೆ ಚುನಾವಣೆಗೆ ಮಸ್ಟರಿಂಗ್ ಕಾರ್ಯ ನಡೆಯುತ್ತಿದೆ. ಇಲ್ಲಿದ್ದ ಎಲ್ಲಾ ಮತಗಟ್ಟೆಗಳಿಗೆ ಅಧಿಕಾರಿಗಳನ್ನು ರವಾನಿಸಲಾಗುತ್ತದೆ. ನಾವು 495 ಮತಗಟ್ಟೆ ಅಧಿಕಾರಿಗಳ ತಂಡವನ್ನು ರಚಿಸಿದ್ದೇವೆ ಅದರಲ್ಲಿ ನಮಗೆ 448ಮತಗಟ್ಟೆಗಳು ಮಾತ್ರ ಕಾರ್ಯಚರಿಸಿತ್ತದೆ. ಯಾವುದೇ ತುರ್ತು ಪರಿಸ್ಥಿತಿಗಾಗಿ ಹೆಚ್ಚುವರಿ ಅಧಿಕಾರಿಗಳನ್ನು ನಿಯೋಜಿಸಿದ್ದೇವೆ. ಎಂದು ಹೇಳಿದರು.
ಇನ್ನೂ ಭದ್ರತಾ ವಿಚಾರವಾಗಿ ಹೆಚ್ಚುವರಿ ಪೊಲೀಸ್ ಸಿಬ್ಬಂದಿಗಳನ್ನು ಆಯೋಜಿಸಲಾಗಿದ್ದು. ಚುನಾವಣಾ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಕ್ರಮ ಕೈಗೊಳ್ಳಲಾಗಿದೆ. ಒಟ್ಟಿನಲ್ಲಿ ನಾಳೆ ನಡೆಯಲಿರು ಪಾಲಿಕೆ ಚುನಾವಣೆಗೆ ಜಿಲ್ಲಾಡಳಿತ ಸಕಲ ಸಿದ್ದತೆಯಿಂದ ಪಣತೊಟ್ಟು ನಿಂತಿದೆ.

Related posts

Leave a Reply

Your email address will not be published. Required fields are marked *