
ಮಂಗಳೂರು ವಿಮಾನ ನಿಲ್ದಾಣಕ್ಕೆ ಕಾರಣಿಕ ಪುರುಷರಾದ ಕೋಟಿ ಚೆನ್ನಯ ನಾಮಕರಣಗೊಳಿಸಲು ಆಗ್ರಹಿಸಿ ಬಿಲ್ಲವ ಬ್ರಿಗೇಡ್ ನೇತೃತ್ವದಲ್ಲಿ ಕೋಟಿ-ಚೆನ್ನಯ ಸಂಚಲನ ಸಮಿತಿಯ ಸಹಯೋಗದೊಂದಿಗೆ ವಿವಿಧ ಸಂಘಟನೆಗಳ ಸಹಕಾರದಲ್ಲಿ ಪಾದಯಾತ್ರೆ ನಡೆಸಿದರು.ಅಖಿಲ ಭಾರತ ಬಿಲ್ಲವ ಮಹಾಮಂಡಲದ ಅಧ್ಯಕ್ಷರಾದ ರಾಜಶೇಖರ್ ಕೋಟ್ಯಾನ್ ಅವರು ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದರು.
ಈ ಸಂದರ್ಭ ಸಂಚಲನ ಸಮಿತಿಯ ಪ್ರಧಾನ ಸಂಚಾಲಕ ಸತ್ಯಜಿತ್ ಸುರತ್ಕಲ್, ಸಂಚಲನ ಸಮಿತಿಯ ಉಪಾಧ್ಯಕ್ಷ ಸೂರಜ್ ಕಲ್ಯ, ಬಿಲ್ಲವ ಬ್ರಿಗೇಡ್ನ ಅಧ್ಯಕ್ಷ ಜೀವನ್ ಪೂಜಾರಿ, ಸ್ಥಾಪಕ ಅಧ್ಯಕ್ಷ ಅವಿನಾಶ್ ಸುವರ್ಣ, ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಸನಿಲ್, ಸಂಘಟನಾ ಕಾರ್ಯದರ್ಶಿ ಅಶ್ವಥ್ ಉಪ್ಪಳ ಮೊದಲಾದವರು ಭಾಗವಹಿಸಿದ್ದರು.