Header Ads
Header Ads
Breaking News

ಮಂಗಳೂರು ವಿವಿ ಮಟ್ಟದ ಕ್ರಾಸ್‌ಕಂಟ್ರಿ ಚಾಂಪಿಯನ್‌ಶಿಪ್. ಆಗಸ್ಟ್ 17ರಂದು ನಡೆಯಲಿರುವ ಸ್ಪರ್ಧೆ. ಪುರುಷರ ಮತ್ತು ಮಹಿಳೆಯರಿಗಾಗಿ ನಡೆಯಲಿರುವ ಕ್ರೀಡಾಕೂಟ.

ಹಳೆಯಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಪುರುಷರ ಮತ್ತು ಮಹಿಳೆಯರ ಕ್ರಾಸ್‌ಕಂಟ್ರಿ ಚಾಂಪಿಯನ್‌ಶಿಪ್ ಆಗಸ್ಟ್ 17ರಂದು ನಡೆಯಲಿದೆ ಎಂದು ಕಾಲೇಜು ಪ್ರಿನ್ಸಿಪಾಲ್ ಡಾ. ಬಿಪಿ. ಪ್ರಸನ್ನ ಹೇಳಿದರು.ಹಳೆಯಂಗಡಿ ಸರಕಾರಿ ಕಾಲೇಜಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿ, ವಿಶ್ವವಿದ್ಯಾನಿಲಯದ ಸುಮಾರು 40 ಕಾಲೇಜಿನ 300 ಕ್ರೀಡಾಪಟುಗಳ ಭಾಗವಹಿಸುವ ನಿರೀಕ್ಷೆ ಇದೆ. ಪುರುಷರ ವಿಭಾಗದಲ್ಲಿ 10 ಕಿ.ಮೀ ಮತ್ತು ಮಹಿಳೆಯರ ವಿಭಾಗದಲ್ಲಿ6 ಕಿ.ಮೀ. ಸ್ಪರ್ಧೆ ನಡೆಯಲಿದೆ. ಈ ಪಂದ್ಯಾಟದಲ್ಲಿ ಆಯ್ಕೆಯಾದವರು ಅಕ್ಟೋಬರ್ 4ರಂದು ಗುಲ್ಬರ್ಗದಲ್ಲಿ ನಡೆಯಲಿರುವ ಅಲ್‌ಇಂಡಿಯಾ ಅಂತರ ವಿಶ್ವವಿದ್ಯಾನಿಲಯ ಮಟ್ಟದ ಕ್ರಾಸ್ ಕಂಟ್ರಿ ಸ್ಪರ್ಧೆಯಲ್ಲಿ ಭಾಗವಹಿಸಲು ಅರ್ಹತೆ ಪಡೆಯಲಿದ್ದಾರೆ ಎಂದರು.ಸಮಾರೋಪ ಸಮಾರಂಭದಲ್ಲಿ ಮುಲ್ಕಿ ಮೂಡಬಿದಿರೆ ಶಾಸಕ ಉಮಾನಾಥ ಕೋಟ್ಯನ್, ಮಂಗಳೂರು ವಿ.ವಿ. ಪ್ರಭಾರ ಕುಲಪತಿ ಡಾ. ಕಿಶೋರ್ ಕುಮಾರ್ ಸಿ.ಕೆ. ಆಳ್ವಾಸ್ ಸಂಸ್ಥೆಯ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಹಾಗೂ ಗಣ್ಯರು ಭಾಗವಹಿಸಲಿದ್ದಾರೆ. ಎಂದು ತಿಳಿಸಿದರು. ಸುದಿಗೋಷ್ಠಿಯಲ್ಲಿ ದ.ಕ. ಜಿಲ್ಲಾ ಪಂಚಾಯಿತಿ ಸದಸ್ಯ ವಿನೋದ್‌ಕುಮಾರ್ ಬೊಳ್ಳೂರು, ಪಿಸಿಎ ಬ್ಯಾಂಕ್‌ನ ಅಧ್ಯಕ್ಷ ಎಸ್.ಎಸ್.ಸತೀಶ್ ಭಟ್ ಕೊಳುವೈಲು, ಕಾಲೇಜು ಅಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷ ಹಿಮಕರ್ ಕದಿಕೆ, ದೈಹಿಕ ನಿರ್ದೇಶಕ ಪ್ರವೀಣ್‌ಕುಮಾರ್ ಉಪಸ್ಥಿತರಿದ್ದರು. 

Related posts

Leave a Reply