Breaking News

ಮಂಗಳೂರು ವಿವಿ ಸಂಜೆ ಕಾಲೇಜಿನಲ್ಲಿ ಓಪನ್ ಹೌಸ್ ಕಾರ್ಯಕ್ರಮ, ಮೇಯರ್ ಕವಿತಾ ಸನಿಲ್‌ರಿಂದ ಉದ್ಘಾಟನೆ

ಮಂಗಳೂರಿನ ವಿಶ್ವವಿದ್ಯಾನಿಲಯ ಕಾಲೇಜು ಹಾಗೂ ವಿಶ್ವ ವಿದ್ಯಾನಿಲಯ ಸಂಧ್ಯಾ ಕಾಲೇಜಿನ ಲಭ್ಯವಿರುವ ವಿವಿಧ ಕೋರ್ಸುಗಳ ಮಾಹಿತಿ, ಶೈಕ್ಷಣಿಕ ಸಾಧನೆಗಳ ಮಾಹಿತಿಗಳನ್ನು ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ತಿಳಿಸುವ ನಿಟ್ಟಿನಲ್ಲಿ ಓಪನ್ ಹೌಸ್ ಕಾರ್ಯಕ್ರಮ ಉದ್ಘಾಟನೆಗೊಂಡಿತು.
ಮಂಗಳೂರಿನ ಹಂಪನಕಟ್ಟೆ ವಿಶ್ವ ವಿದ್ಯಾನಿಲಯ ಕಾಲೇಜಿನ ಶಿವರಾಮ ಕಾರಂತ ಭವನದಲ್ಲಿ ನಡೆದ ಕಾರ್ಯಕ್ರಮವನ್ನು ಮೇಯರ್ ಕವಿತಾ ಸನೀಲ್ ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಮೇಯರ್‌ರು ಇದೊಂದು ಉತ್ತಮ ಕಾರ್ಯಕ್ರಮ. ಕೇವಲ ಡಾಕ್ಟರ್, ಇಂಜಿನಿಯರ್ ಆಗುವ ಗುರಿ ಹೊಂದಬಾರದು. ಕೆಎಎಸ್ ಹಾಗೂ ಐಪಿಎಸ್ ಅಧಿಕಾರಿ ಆಗುವ ಮನೋಭಾವನೆಯನ್ನು ವಿದ್ಯಾರ್ಥಿಗಳು ಮೈಗೂಡಿಸಿಕೊಳ್ಳಬೇಕೆಂದರು. ಈ ವೇಳೆ ವಿಶ್ವ ವಿದ್ಯಾನಿಲಯ ಕಾಲೇಜಿನ ರಿಜಿಸ್ಟರ್ ಕೆ. ಎಂ. ಲೋಕೇಶ್, ಕಾಲೇಜಿನ ಪ್ರಾಚಾರ್ಯ ಡಾ. ಉದಯ್ ಕುಮಾರ್, ಸಂಧ್ಯಾ ಕಾಲೇಜಿನ ಪ್ರಾಚಾರ್ಯ ಡಾ. ಸುಭಾಶಿಣಿ ಶ್ರೀವತ್ಸ ಮತ್ತಿತರರು ಉಪಸ್ಥಿತರಿದ್ದರು.

Related posts

Leave a Reply