

ಮಂಗಳೂರು: ಎನ್ಐಟಿಕೆ ಮುಂಭಾಗದಲ್ಲಿ ಅಕ್ರಮ ಟೋಲ್ ಸಂಗ್ರಹ ಕೇಂದ್ರವನ್ನು ನಿಲ್ಲಿಸುವ ಬಗ್ಗೆ ಮುಕ್ಕದಲ್ಲಿರುವ ಶ್ರೀ ಸತ್ಯಧರ್ಮ ದೇವಿ ದೇವಸ್ಥಾನದಲ್ಲಿ ಪೂರ್ವಭಾವಿ ಸಭೆ ನಡೆಯಿತು.
ಸಭೆಯಲ್ಲಿ ವಿವಿಧ ಸಂಸ್ಥೆಗಳ ಪ್ರತಿನಿಧಿಗಳು ಭಾಗವಹಿಸಿದ್ದರು. ಜಿಲ್ಲಾಡಳಿತ, ಸಚಿವರು, ಸಂಸದರಿಗೆ ಮತ್ತು ಸಂಬಂಧಪಟ್ಟ ಎಲ್ಲಾ ಶಾಸಕರಿಗೆ ಮನವಿಯನ್ನು ಕಳಹಿಸಲು ಸರ್ವಾನುಮತದಿಂದ ತೀರ್ಮಾನಿಸಲಾಯಿತು. ಈ ನಿಟ್ಟಿನಲ್ಲಿ ಆನ್ಲೈನ್ ಅಭಿಪ್ರಾಯ ಸಂಗ್ರಹ ಮಾಡುವ ಬಗ್ಗೆ ಯೋಚಿಸಲಾಯಿತು. ಮಾತ್ರವಲ್ಲದೆ ಫೆಬ್ರವರಿ10ರಂದು ಮುಕ್ಕಾದ ಶ್ರೀ ಸತ್ಯಧರ್ಮ ದೇವಿ ದೇವಸ್ಥಾನದಲ್ಲಿ ಸಂಜೆ 5 ಗಂಟೆ ಮತ್ತೆ ಸಭೆ ನಡೆಸಲು ತೀರ್ಮಾನಿಸಿದ್ದಾರೆ.