Header Ads
Header Ads
Breaking News

ಮಂದಾರದ ಜನತೆಗೆ ಸಾಂತ್ವನ ಹೇಳಲು ನಾಳೆ ಮಂಗಳೂರಿಗೆ ಆಗಮಿಸಲಿರುವ ಸಿದ್ದರಾಮಯ್ಯ

ಪಚ್ಚನಾಡಿ ಡಂಪಿಂಗ್ ಯಾರ್ಡ್‌ನಲ್ಲಿ ತ್ಯಾಜ್ಯ ರಾಶಿ ಕುಸಿತದಿಂದಾಗಿ ಸಮಸ್ಯೆಗೆ ತುತ್ತಾಗಿರುವ ಮಂದಾರ ಪ್ರದೇಶಕ್ಕೆ ನಾಳೆ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಭೇಟಿ ನೀಡಲಿದ್ದಾರೆ ಎಂದು ಮಾಜಿ ಶಾಸಕ ಮೊಯ್ದೀನ್ ಬಾವ ಹೇಳಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಚ್ಚನಾಡಿಯ ತ್ಯಾಜ್ಯ ರಾಶಿ ಕುಸಿತದಿಂದಾಗಿ ಮಂದಾರದ ಜನತೆ ಸಮಸ್ಯೆಗೆ ತುತ್ತಾಗಿದ್ದಾರೆ. ಸಂತ್ರಸ್ತರೆಲ್ಲರನ್ನೂ ಭೇಟಿ ಮಾಡಿ ಮಾಜಿ ಸಿಎಂ ಸಿದ್ದರಾಮಯ್ಯನವರು ಸಾಂತ್ವನ ಹೇಳಲಿದ್ದಾರೆ. ಬಳಿಕ ಬೆಳ್ತಂಗಡಿಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ ಎಂಬುದಾಗಿ ಮಾಹಿತಿ ನಿಡಿದ್ರು. ಈ ಸಂದರ್ಭ ಮಾಜಿ ಕಾರ್ಪೊರೇಟರ್ ಪ್ರತಿಭಾ ಕುಳಾಯಿ ಸಹಿತ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *