Header Ads
Header Ads
Header Ads
Header Ads
Header Ads
Header Ads
Breaking News

ಮಂದಾರ ಪ್ರದೇಶಕ್ಕೆ ಮನಪಾ ನೂತನ ಆಯುಕ್ತ ಶಾನಾಡಿ ಅಜಿತ್ ಕುಮಾರ್ ಹೆಗ್ಡೆ ಭೇಟಿ

ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರಾಗಿ ಶಾನಾಡಿ ಅಜಿತ್ ಕುಮಾರ್ ಹೆಗ್ಡೆ ಅಧಿಕಾರ ಸ್ವೀಕಾರಿಸಿದ ಮರ ದಿನವೇ ಪಚ್ಚನಾಡಿ ಮಂದಾರ ಪ್ರದೇಶಕ್ಕೆ ಭೇಟಿ ನೀಡಿದ್ದಾರೆ. ಇಂದು ಮುಂಜಾನೆ ಮಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳೊಂದಿಗೆ ಭೇಟಿ ನೀಡಿದ ಕಮೀಷನರ್, ಅಲ್ಲಿನ ಜನರೊಂದಿಗೆ ಚರ್ಚಿಸಿದ್ರು. ಪಚ್ಚನಾಡಿ ತ್ಯಾಜ್ಯ ಸಮಸ್ಯೆ ನಗರದ ಬಹುದೊಡ್ಡ ಸಮಸ್ಯೆಯಾಗಿದೆ. ನಾಳೆ ಬೆಂಗಳೂರಿನ ತಜ್ಞರ ತಂಡ ಆಗಮಿಸಲಿದ್ದು, ತಜ್ಞರು ನೀಡುವ ವರದಿ ಆಧಾರ ಮೇಲೆ ಸಂತ್ರಸ್ತರಿಗೆ ಸರ್ಕಾರ ನೆರವು ನೀಡಲಿದೆ ಎಂದು ಅವರು ಹೇಳಿದ್ರು. ಇನ್ನೂ ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರಾಗಿ ಎರಡನೇ ಬಾರಿ ಆಗಮಿಸಿದ್ದೇನೆ. ನನ್ನ ಆಧಾರ ಮೇಲೆ ಕೆಲಸ ಮಾಡುತ್ತೇನೆ, ಸ್ಥಳೀಯ ಜನಪ್ರತಿನಿಧಿಗಳ ಸಲಹೆ ಪಡೆದುಕೊಂಡು ಕೆಲಸ ನಿರ್ವಹಿಸಿಕೊಳ್ಳುತ್ತೇನೆ ಅಂತಾ ತಿಳಿಸಿದರು.ನಗರದಲ್ಲಿ ಬಹುವಾಗಿ ಕಾಡುತ್ತಿರುವ ಡೆಂಗ್ಯೂ, ಕಸದ ಸಮಸ್ಯೆ ಬಗ್ಗೆ ಹೆಚ್ಚಿನ ಆದ್ಯತೆ ಮೇರೆಗೆ ಕೆಲಸ ಮಾಡುತ್ತೇನೆ. ಪಾಲಿಕೆ ಆಡಳಿತ ವ್ಯವಸ್ಥೆ ಗೆ ಚುರುಕು ಮಟ್ಟಿಸುವ ಕೆಲಸ ಮಾಡುತ್ತೇನೆ ಎಂದು ಅವರು ಹೇಳಿದರು.ಸದ್ಯದಲ್ಲೇ ಪಾಲಿಕೆ ಚುನಾವಣೆ ಬರಲಿದ್ದು, ಪಾರದರ್ಶಕ ಚುನಾವಣೆಗೆ ಕ್ರಮ ಕೈಗೊಳ್ಳಲಾಗುವುದು ಅಂತಾ ತಿಳಿಸಿದರು.

Related posts

Leave a Reply

Your email address will not be published. Required fields are marked *