Header Ads
Breaking News

ಮಕ್ಕಳಿಗೆ ಭೀತಿಯಿಲ್ಲದಂತೆ ಎಸ್‍ಎಸ್‍ಎಲ್‍ಸಿ ಪರೀಕ್ಷೆ ನಡೆಯಲಿ- ಶಾಸಕ ಸಂಜೀವ ಮಠಂದೂರು

ಪುತ್ತೂರು: ಕೊರೊನಾದಿಂದ ಜಗತ್ತು ಸ್ತಬ್ದವಾಗಿದ್ದು, ಡಬ್ಲುಎಚ್‍ಒ ಮಾರ್ಗಸೂಚಿಯ ಪಾಲನೆಯಿಂದ ನಾವೆಲ್ಲರೂ ಸುರಕ್ಷಿತವಾಗಿದ್ದೇವೆ. ಇದೇ ಮಾರ್ಗಸೂಚಿ ಅನುಸರಣೆಯೊಂದಿಗೆ ಮಕ್ಕಳಿಗೆ ಯಾವುದೇ ಭೀತಿ ಇಲ್ಲದಂತೆ ಈ ಬಾರಿಯ ಎಸ್‍ಎಸ್‍ಎಲ್‍ಸಿ ಪರೀಕ್ಷೆ ನಡೆಯಲಿ ಎಂದು ಶಾಸಕ ಸಂಜೀವ ಮಠಂದೂರು ತಿಳಿಸಿದರು.

ಅವರು ಪುತ್ತೂರಿನ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ದ ಸಹಯೋಗದಲ್ಲಿ ಶಾಸಕ ಸಂಜೀವ ಮಠಂದೂರು ಅವರ ಅಧ್ಯಕ್ಷತೆಯಲ್ಲಿ ಇಲ್ಲಿನ ಸಂತ ವಿಕ್ರ?ಸ್ ಪ್ರೌಢಶಾಲಾ ಸಭಾಂಗಣದಲ್ಲಿ ನಡೆದ ಎಸ್‍ಎಸ್‍ಎಲ್‍ಸಿ ಪರೀಕ್ಷಾ ತಯಾರಿಯ ತಾಲೂಕು ಮಟ್ಟದ ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಭೆಯಲ್ಲಿ ಅವರು ಮಾತನಾಡಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಸಿ ಮತ್ತು ಎಸ್‍ಎಸ್‍ಎಲ್‍ಸಿ ಪರೀಕ್ಷಾ ನೋಡೆಲ್ ಅಧಿಕಾರಿ ಜಯರಾಮ ಶೆಟ್ಟಿ ಪರೀಕ್ಷಾ ತಯಾರಿಗಳ ಬಗ್ಗೆ ಮಾಹಿತಿ ನೀಡಿದರು. ಶಿಕ್ಷಣ ಇಲಾಖೆಯ ಸುಂದರ ಗೌಡ, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ತಾಪಂ ಸ್ಥಾಯಿ ಸಮಿತಿ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಮಾಯ್ದೇ ದೇವುಸ್ ಚರ್ಚನ ಧರ್ಮಗುರು ಫಾ. ಆಲ್ಫ್ರೆಡ್ ಜೆ ಪಿಂಟೋ, ಡಿಡಿಪಿಐ ಮಲ್ಲೇಸ್ವಾಮಿ ಮತ್ತಿತರರು ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *