Header Ads
Breaking News

ಮದನಿನಗರ ಘರ್ಷಣೆಗೆ ಕಾಂಗ್ರೆಸ್ಸೇ ಕಾರಣ: ಸಂತೋಷ್ ಕುಮಾರ್ ರೈ ಬೋಳಿಯಾರು

ಶನಿವಾರ ಸಂಜೆ ಮದನಿ ನಗರದಲ್ಲಿ ನಡೆದ ಘರ್ಷಣೆಗೆ ಕಾಂಗ್ರೆಸ್‌ನವರೇ ಪ್ರಮುಖ ಕಾರಣ ಎಂದು ಬಿಜೆಪಿ ಮಂಗಳೂರು ಕ್ಷೇತ್ರ ಅಧ್ಯಕ್ಷ ಸಂತೋಷ್ ಕುಮಾರ್ ರೈ ಬೋಳಿಯಾರ್ ಆರೋಪಿಸಿದರು.

ಬಿಜೆಪಿ ಮಂಗಳೂರು ಕ್ಷೇತ್ರದ ತೊಕ್ಕೊಟ್ಟು ಕಾಪಿಕಾಡಿನ ಚುನಾವಣಾ ಕಾರ್ಯಾಲಯದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಮಂಗಳೂರಿನ ನೆಹರೂ ಮೈದಾನದಲ್ಲಿ ಶನಿವಾರ ಸಂಜೆ ನಡೆದ ವಿಜಯ ಸಂಕಲ್ಪ ಯಾತ್ರೆಯಲ್ಲಿ ಪಾಲ್ಗೊಂಡ ಪ್ರಧಾನಿ ನರೇಂದ್ರ ಮೋದಿ ಅವರ ಭಾಷಣವನ್ನು ಆಲಿಸಲು ಜಮಾಯಿಸಿದ ಜನಸಾಗರವನ್ನು ಕಂಡು ಅರಗಿಸಲಾರದೆ ಕಾಂಗ್ರೆಸ್ ನವರು ನಡೆಸಿದ ಈ ಕೃತ್ಯ ಪೂರ್ವ ನಿಯೋಜಿತವಾಗಿದೆ. ಅದಕ್ಕೆ ಸಾಕ್ಷ್ಯ ಎಂಬಂತೆ ಘಟನೆ ನಡೆದ ಕೆಲವೇ ನಿಮಿಷದ ಬಳಿಕ ಕೃತ್ಯ ಎಸಗಿದ ಆರೋಪಿಗಳು ಬಗಂಬಿಲದಲ್ಲಿ ನಡೆದ ರೋಡ್ ಶೋನಲ್ಲಿ ಭಾಗವಹಿಸಿದ್ದಾರೆ ಎಂದರು. ಕಾಂಗ್ರೆಸ್‌ನ ಕುಟಿಲ ಕೃತ್ಯವನ್ನು ಬಿಜೆಪಿ ಕಾರ್ಯಕರ್ತರು ಪ್ರಬಲವಾಗಿ ಖಂಡಿಸುತ್ತೇವೆ ಎಂದರು.

ಸುದ್ದಿಗೋಷ್ಠಿಯಲ್ಲಿ ಮಾಜಿ ಶಾಸಕ ಕೆ. ಜಯರಾಮ ಶೆಟ್ಟಿ, ವಿಧಾನ ಪರಿಷತ್ ಮಾಜಿ ಮುಖ್ಯ ಸಚೇತಕ ಕ್ಯಾ. ಗಣೇಶ್ ಕಾರ್ನಿಕ್, ಕ್ಷೇತ್ರ ಚುನಾವಣಾ ಉಸ್ತುವಾರಿ ರಾಧಾಕೃಷ್ಣ ಬೂಡಿಯಾರ್, ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಕೆ. ರವೀಂದ್ರ ಶೆಟ್ಟಿ ಉಳಿದೊಟ್ಟು, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಚಂದ್ರಹಾಸ್ ಉಳ್ಳಾಲ್ ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *