Header Ads
Breaking News

ಮನಪಾದಲ್ಲಿ ತುಘಲಕ್ ಆಡಳಿತ – ಮಿಥುನ್ ರೈ ಆರೋಪ

ಮಂಗಳೂರು ನಗರದಲ್ಲಿ ಮಾಜಿ ಶಾಸಕರಾದ ಜೆ.ಆರ್. ಲೋಬೋ ಅವರ ಪ್ರಯತ್ನದಿಂದ ಬಂದ ಸ್ಮಾರ್ಟ್ ಸಿಟಿ ಯೋಜನೆಯ ಕಾಮಗಾರಿಗಳು ನಡೆಯುತ್ತಿದೆ. ಹಂಪನಕಟ್ಟೆ, ವೆಂಕಟ್ರಮಣ ಟೆಂಪಲ್ ವೃತ್ತ ಸೇರಿದಂತೆ ಮುಂತಾದ ಆನೇಕ ಪ್ರಮುಖ ವೃತ್ತ ರಸ್ತೆಗಳಲ್ಲಿ ಏಕಕಾಲದಲ್ಲಿ ಅವೈಜ್ಞಾನಿಕ ರೀತಿಯಿಂದ ಕಾಮಗಾರಿ ನಡೆಸಲಾಗುತ್ತಿದೆ ಎಂದು ಕಾಂಗ್ರೆಸ್ ಮುಖಂಡರು ಆರೋಪಿಸಿದ್ದಾರೆ.

ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಅವರು, ಮಂಗಳೂರಿನಲ್ಲಿ ಸ್ಮಾರ್ಟ್ ಸಿಟಿ ಹೆಸರಿನಲ್ಲಿ ಕಾಮಗಾರಿ ನಡೆಸುತ್ತಿದ್ದಾರೆ. ಮಂಗಳೂರಿನ ವಿವಿಧ ಕಡೆಗಳಲ್ಲಿ ರಸ್ತೆ ಸಂಚಾರವನ್ನು ಬಂದ್ ಮಾಡಿಸಿ ಕಾಮಗಾರಿ ನಡೆಸುತ್ತಿದ್ದಾರೆ ಇದರಿಂದ ಸಾರ್ವಜನಿಕರಿಗೆ ತುಂಬಾ ತೊಂದರೆಯಾಗುತ್ತಿದೆ. ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಶಾಸಕರಾದ ವೇದವ್ಯಾಸ ಕಾಮತ್ ಮತ್ತು ಮೇಯರ್ ದಿವಾಕರ್ ಅವರು ತುಘಲಕ್ ಆಡಳಿತ ನಡೆಸುತ್ತಿದ್ದಾರೆ ಎಂದು ಆರೋಪಿಸಿದರು. ಮೋದಿ ನೇತೃತ್ವದ 2.0 ಪ್ರಕಾರದ ಆಡಳಿತದಲ್ಲಿ ಆರ್ಥಿಕ ಕುಸಿತ ಆಗುತ್ತಿದ್ದ ಸಂದರ್ಭ ಕೋವಿಡ್ ಮಹಾಮಾರಿಯಿಂದ ಸಂಪೂರ್ಣ ಆರ್ಥಿಕ ಕುಸಿತಗೊಂಡಿದೆ. ಕೂಲಿ ಕಾರ್ಮಿಕರು, ಕಾರು, ಆಟೋ, ರಿಕ್ಷಾ ಚಾಲಕರು ಕಟ್ಟಡ ಕಾರ್ಮಿಕರು, ರೈತರು ಅದಾಯವಿಲ್ಲದೆ ಕಂಗಾಲಾಗಿದ್ದಾರೆ ಎಂದು ಹೇಳಿದರು.ಈ ಸಂದರ್ಭ ಸುದ್ದಿಗೋಷ್ಠಿಯಲ್ಲಿ ಮಾಜಿ ಶಾಸಕ ಜೆ.ಆರ್. ಲೋಬೊ, ಪಾಲಿಕೆಯ ವಿಪಕ್ಷ ನಾಯಕ ಅಬ್ದುಲ್ ರವೂಫ್ ಮತ್ತಿತರರು ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *