Header Ads
Header Ads
Breaking News

ಮನಪಾ ಚುನಾವಣೆಯ ಸೀಟು ಹಂಚಿಕೆಯಲ್ಲಿ ನಿಷ್ಠಾವಂತರ ಕಡೆಗಣನೆ :ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹುಸೈನ್ ರಾಜೀನಾಮೆ

ಮಂಗಳೂರು ಮಹಾನಗರ ಪಾಲಿಕೆ ಚುನಾವಣೆ ನವೆಂಬರ್ 12ರಂದು ನಡೆಯಲಿದ್ದು, ಕಾಂಗ್ರೆಸ್ ಪಕ್ಷದಲ್ಲಿ ನಿಷ್ಟಾವಂತ ನಾಯಕರನ್ನು ಕಡೆಗಣಿಸಿ ಅನುಭವವಿಲ್ಲದವರಿಗೆ ಸ್ಪರ್ಧಿಸಲು ಅವಕಾಶ ನೀಡಲಾಗಿದೆ. ಈ ಅನ್ಯಾಯವನ್ನು ಪ್ರತಿಭಟಿಸಿ ರಾಜೀನಾಮೆ ಸಲ್ಲಿಸಿದ್ದೇನೆ ಎಂದು ಕಾಟಿಪಳ್ಳ ಪೂರ್ವ ವಾರ್ಡ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹುಸೈನ್ ಕಾಟಿಪಳ್ಳ ಹೇಳಿದರು.

ಅವರು ಈ ಬಗ್ಗೆ ಪ್ರತಿಕ್ರಿಯೆ ನೀಡಿ, ಸುಮಾರು 10 ವರ್ಷಗಳ ಕಾಲ ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿಯೂ, 1 ವರ್ಷ ಉಪಾಧ್ಯಕ್ಷನಾಗಿಯೂ ಸೇವೆ ಸಲ್ಲಿಸಿದ್ದ ಮತ್ತು ಪ್ರಸ್ತುತ ಕಾಟಿಪಳ್ಳ ವಾರ್ಡ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷನಾಗಿದ್ದೇನೆ. ಇದೀಗ ಮಂಗಳೂರು ಮಹಾನಗರ ಪಾಲಿಕೆ ಚುನಾವಣೆಗೆ ಸ್ಪರ್ಧಿಸಲು ನಿಷ್ಟಾವಂತ ನಾಯಕರನ್ನು ಕಡೆಗಣಿಸಿದ್ದಾರೆ. ರಾಜಕೀಯ ಹಾಗೂ ಸಾಮಾಜಿಕ ರಂಗದಲ್ಲಿ ಅನಿಭವವಿಲ್ಲದ ಮತ್ತು ಮನೆಯಲ್ಲಿ ಮಲಗಿದ್ದವರನ್ನು ತಂದು ಸ್ಪರ್ಧಿಸಲು ಅವಕಾಶ ನೀಡಲಾಗಿದೆ. ಈ ಅನ್ಯಾಯವನ್ನು ಪ್ರತಿಭಟಿಸಿ ರಾಜೀನಾಮೆ ಸಲ್ಲಿಸಿದ್ದೇನೆ ಎಂದು ಹೇಳಿದ್ದಾರೆ.

Related posts

Leave a Reply

Your email address will not be published. Required fields are marked *