Header Ads
Breaking News

ಮನಪಾ ವ್ಯಾಪ್ತಿಯಲ್ಲಿ ಸ್ಮಾರ್ಟ್‍ಸಿಟಿ ಯೋಜನೆ ಕೆಲಸ ಆರಂಭ : ಮುನ್ಸೂಚನೆ ನೀಡದೆ ರಸ್ತೆ ಬಂದ್ ಮಾಡಿದ್ದರಿಂದ ಜನತೆಗೆ ತೊಂದರೆ

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸ್ಮಾರ್ಟ್‍ಸಿಟಿ ಯೋಜನೆ ಕೆಲಸ ಕಾರ್ಯಗಳು ಆರಂಭವಾಗಿ ಎರಡು ವರ್ಷವಾಯಿತು. ರಸ್ತೆಗಳ ಅಭಿವೃದ್ಧಿ ಕೆಲಸಗಳು ನಡೆಯುತ್ತಾ ಇದೆ. ಆದರೆ ಜನತೆಗೆ ಯಾವುದೇ ಮುನ್ಸೂಚನೆ ನೀಡದೇ ರಸ್ತೆ ಬಂದ್ ಮಾಡಿ ಕೆಲಸ ಆರಂಭಿಸಿದ್ದಂತೆ ಮಂಗಳೂರಿನ ಜನತೆ ತೊಂದರೆಗೆ ಸಿಲುಕಿದ್ದಾರೆ. ಇನ್ನು ಜಿಲ್ಲಾಡಳಿತದಲ್ಲಿ ಆಡಳಿತ ಮಾಡುವವರು ಸಂಪೂರ್ಣ ವಿಫಲರಾಗಿದ್ದಾರೆ ಎಂದು ಪಾಲಿಕೆಯ ವಿಪಕ್ಷ ನಾಯಕ ಅಬ್ದುಲ್ ರವೂಫ್ ಆರೋಪಿಸಿದರು.
ಅವರು ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಸ್ಮಾರ್ಟ್‍ಸಿಟಿಯ ಕಾನ್ಸೆಪ್ಟ್‍ನ್ನು ಬಿಟ್ಟು ಬೇರೇ ರೀತಿಯ ಕೆಲಸ ಕಾರ್ಯಗಳು ನಡೆಯುತ್ತಿದೆ. ಆ ಕಾಮಗಾರಿಯಲ್ಲಿ ಕ್ವಾಲಿಟಿ ಅನ್ನೊದೇ ಇಲ್ಲದಂತಾಗಿದೆ. ಯಾವುದೇ ಅಭಿವೃದ್ಧಿ ಕೆಲಸಗಳಲ್ಲಿ ಗುಣಮಟ್ಟ ಕಾಪಾಡುವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ ಎಂದು ಆರೋಪಿಸಿದರು.ಆನಂತರ ಪಾಲಿಕೆಯ ಸದಸ್ಯರಾದ ಲ್ಯಾನ್ಸಿಲಾಟ್ ಪಿಂಟೋ ಅವರು ಮಂಗಳೂರಿನ ನೆಹರೂ ಮೈದಾನವನ್ನು ಕ್ರೀಡೆಗೆ ಬಿಟ್ರೆ ಬೇರೆ ಯಾವುದಕ್ಕೂ ಸಹ ಉಪಯೋಗಿಸಬಾರದು ಎಂದು ಕೋರ್ಟ್ ಆದೇಶ ನೀಡಿದೆ. ಈಗಾಗಲೇ ಅಲ್ಲಿ ಮಾರುಕಟ್ಟೆ ನಿರ್ಮಿಸಲೆಂದು ಕೈಗೊಂಡ ಕಾಮಗಾರಿಗೆ ಒಂದೂವರೆ ಕೋಟಿ ರೂಪಾಯಿ ಖರ್ಚಾಗಿದೆ. ಇದೀಗ ಅದನ್ನು ಡೆಮಾಲಿಷ್ ಮಾಡಲು ಹೈಕೋರ್ಟ್ ಆದೇಶ ನೀಡಿದೆ. ಆ ಒಂದೂವರೆ ಕೋಟಿ ರೂಪಾಯಿ ಹಣವನ್ನು ಪೋಲು ಮಾಡಿದಂತಾಗಿದೆ ಎಂದು ಹೇಳಿದರು.ಸುದ್ದಿಗೋಷ್ಠಿಯಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಮಾಜಿ ಮೇಯರ್ ಶಶಿಧರ್ ಹೆಗ್ಡೆ, ಪಾಲಿಕೆಯ ಸದಸ್ಯರಾದ ನವೀನ್ ಡಿಸೋಜಾ, ಅಬ್ದುಲ್ ಲತೀಫ್, ಕೇಶವ ಮರೋಳಿ ಮತ್ತಿತರರು ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *