Header Ads
Header Ads
Header Ads
Header Ads
Header Ads
Header Ads
Breaking News

ಮನೆಯೊಂದರಲ್ಲಿ ದಾಸ್ತಾನಿರಿಸಿದ್ದ ಆನೆ ದಂತ ವಶಕ್ಕೆ

ಬೆಳ್ತಂಗಡಿ ತಾಲೂಕಿನ ಸುರ್ಯ ರಸ್ತೆಯ ಮನೆಯೊಂದರಲ್ಲಿ ದಾಸ್ತಾನಿರಿಸಿದ್ದ ಆನೆ ದಂತವನ್ನು ಮಂಗಳೂರು ಸಂಚಾರಿ ಅರಣ್ಯ ತಂಡ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ 51ಕೆ.ಜಿ. ಆನೆ ದಂತ ವಶಕ್ಕೆ ಪಡೆದ ಘಟನೆ ನಡೆದಿದೆ.ಖಚಿತ ಮಾಹಿತಿ ಮೇರೆಗೆ ಸುರ್ಯ ಸಮೀಪದ ಮನೆಯೊಂದಕ್ಕೆ ದಾಳಿ ನಡೆಸಿ 51 ಕೆ.ಜಿ.ಯ 10 ಆನೆ ದಂತ ವಶಕ್ಕೆ ಪಡೆದಿದ್ದು ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಕಳೆದು ಮೂರು ತಿಂಗಳಿಂದ ಆನೆ ದಂತ ದಾಸ್ತಾನು ಇರಿಸಿದ್ದು ಮಾತ್ರವಲ್ಲದೆ ಮಾರಾಟ ಜಾಲದ ಕುರಿತು ಇಲಾಖೆಗೆ ಮಾಹಿತಿ ಲಭಿಸಿತ್ತು. ಈ ಕುರಿತು ಪ್ರಕರಣ ಭೇದಿಸಿದ ತಂಡ ಸತತ ಕಾರ್ಯಾಚರಣೆ ಬಳಿಕ ಸುರ್ಯ ದೇವಸ್ಥಾನ ರಸ್ತೆಯ ಅಬ್ರಾಹಂ, ಅನ್ವರ್, ಸುರೇಶ್ ಬಾಬು ಎಂಬುವರನ್ನು ಬಂಧಿಸಿ ತನಿಖೆ ಕೈಗೊಂಡಿದೆ. ಮತ್ತೋರ್ವ ತಲೆ ಮರೆಸಿಕೊಂಡಿರುವ ಕುರಿತು ಮಾಹಿತಿ ಲಭ್ಯವಾಗಿದೆ. ಬೆಳ್ತಂಗಡಿ ಅರಣ್ಯ ಇಲಾಖೆಗೆ ಪ್ರಕರಣದ ಮುಂದಿನ ತನಿಖೆಗೆ ಹಸ್ತಾಂತರಿಸಲಿದೆ.

Related posts

Leave a Reply

Your email address will not be published. Required fields are marked *