Header Ads
Breaking News

ಮನೆ ಮನೆಗೆ ತೆರಳಿ ಕೊರೊನಾ ಜಾಗೃತಿ ಮೂಡಿಸುತ್ತಿರುವ ಕಾಂಗ್ರೆಸ್ ಕಾರ್ಯಕರ್ತರು

ಕೋವಿಡ್ 19 ನಿಭಾಯಿಸುವ ನಿಟ್ಟಿನಲ್ಲಿ ಮಂಗಳೂರಿನ ಉತ್ತರ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರು ಮನೆ ಮನೆಗೆ ತೆರಳಿ ಜನ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದಾರೆ.
ಮಾಜಿ ಶಾಸಕ ಮೊಯಿದ್ದೀನ್ ಬಾವಾ ನೇತೃತ್ವದದಲ್ಲಿ ಮಂಗಳೂರು ಉತ್ತರ ಕಾಂಗ್ರೆಸ್ ವಾರಿಯರ್ಸ್ ಎಂಬ ಹೆಸರಿನಲ್ಲಿ ಕ್ಷೇತ್ರದ ಪ್ರತಿ ಮನೆ ಮನೆಗೆ ತೆರಳಿ ಜನರ ಬಾಡಿ ಟೆಂಪರೇಚರ್ ಹಾಗು ಬ್ಲಡ್ ಆಕ್ಸಿಜನ್ ಸ್ಯಾಚುರೇಶನ್ ನೋಡಲಿದ್ದಾರೆ. ಈ ಹಿನ್ನೆಲೆ ಕಾರ್ಯಕರ್ತರಿಗೂ ಗ್ಲೌಸ್, ಫೇಸ್ ಶೀಲ್ಡ್, ಸ್ಯಾನಿಟೈಸರ್, ಮಾಸ್ಕ್ ಮತ್ತಿತರ ಸುರಕ್ಷಾ ಕಿಟ್‍ಗಳನ್ನೂ ನೀಡಲಾಗಿದೆ.
ಒಂದು ವೇಳೆ ಆರೋಗ್ಯದಲ್ಲಿ ಏರು ಪೇರು ಕಂಡು ಬಂದಲ್ಲಿ ಅವರನ್ನು ಸೂಕ್ತ ತಪಾಸಣೆಗೆ ಒಳಪಡಿಸಲಿದ್ದಾರೆ. ಅಗತ್ಯ ಬಿದ್ದರೆ ಆಂಬುಲೆನ್ಸ್ ಸೇವೆ, ಆಸ್ಪತ್ರೆಯ ವ್ಯವಸ್ಥೆ ಮಾಡಿಕೊಡಲಿದ್ದಾರೆ.
ಈ ಬಗ್ಗೆ ಮಾತನಾಡಿದ ಮಾಜಿ ಶಾಸಕ ಮೊಯಿದ್ದೀನ್ ಬಾವಾ, ಕೊರೊನಾ ವೇಗವಾಗಿ ಹರಡುತ್ತಿದೆ. ಮನೆ ಮನೆಯಲ್ಲೂ ಸಮಸ್ಯೆಗಳು ಎದುರಾಗುವ ಹಂತ ತಲುಪಿದೆ. ಇದನ್ನು ಮನಗಂಡು ಜನರ ಆರೋಗ್ಯ ಭಾಗ್ಯಕ್ಕಾಗಿ ಇದೊಂದು ಮಾದರಿ ಪ್ರಾಜೆಕ್ಟ್ ನ್ನು ಆರಂಭಿಸಿದ್ದೇನೆ ಎಂದು ಹೇಳಿದ್ರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *