
ಚಾಲಕ ನಿಯಂತ್ರಣ ತಪ್ಪಿ ಸಿಮೆಂಟ್ ಹೊತ್ತ ಪಿಕಪ್ ಒಂದು ಮನೆಯೊಳಗೆ ನುಗಿದ ಘಟನೆ ಮಂಗಳೂರಿನ ಮರೋಳಿ ಎಂಬಲ್ಲಿ ನಡೆದಿದೆ. ಘಟನೆಯಲ್ಲಿ ಪಿಕಪ್ನಲ್ಲಿದ್ದರು ಗಂಭೀರ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಅದೃಷ್ಟವಶಾತ್ ಮನೆಯೊಳಗಿದ್ದ ತಾಯಿ ಮತ್ತು ಮಗಳಿಗೆ ಯಾವುದೇ ಅಪಾಯ ಸಂಭವಿಸಿಲ್ಲ. ಆದ್ರೆ ಪಿಕಪ್ ಮನೆಗೆ ನುಗ್ಗಿದ ಪರಿಣಾಮ ಮನೆಯು ಸಂಪೂರ್ಣವಾಗಿ ಹಾನಿಯಾಗಿದೆ. ಸ್ಥಳಕ್ಕೆ ಕಂಕನಾಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.