Header Ads
Header Ads
Breaking News

ಮಲೇರಿಯಾ ವಿರೋಧ ಮಾಸಾಚರಣೆ ಮಾಸಾಚರಣೆ : ಪ್ರಚಾರದ 12ನೇ ಕಾರ್ಯಕ್ರಮಕ್ಕೆ ಚಾಲನೆ

ಮಳೆಗಾಲ ಆರಂಭವಾದಂದಿನಿಂದ ಮಲೇರಿಯಾ ಮತ್ತು ಡೆಂಗ್ಯೂ ಜ್ವರ ಎಲ್ಲೆಡೆ ವ್ಯಾಪಕವಾಗಿ ಕಂಡು ಬರುತ್ತಿದೆ. ಸಿಯಾಳದ ಚಿಪ್ಪು, ಟಯರ್‌ಗಳನ್ನು ಮನೆಯ ಸಮೀಪ ಬಿಸಾಡುವುದರಿಂದ ಅದರಲ್ಲಿ ನೀರು ನಿಂತು ಸೊಳ್ಳೆಗಳು ಉತ್ಪತ್ತಿಯಾಗಿ ಹಲವಾರು ರೋಗಗಳಿಗೆ ಕಾರಣವಾಗುತ್ತದೆ. ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಮನೆಯ ಸುತ್ತಮುತ್ತ ಸ್ವಚ್ಛತೆಯನ್ನು ಕಾಪಾಡಬೇಕು ಎಂದು ಪುರಸಭಾ ಸದಸ್ಯ ಜೊಸ್ಸಿ ಮಿನೇಜಸ್ ಹೇಳಿದರು.ಅವರು ಜವನೆರ್ ಬೆದ್ರ, ಸಮುದಾಯ ಆರೋಗ್ಯ ಕೇಂದ್ರ, ಪುರಸಭೆ ಮೂಡುಬಿದಿರೆ, ತಾಲೂಕು ಪತ್ರಕರ್ತರ ಸಂಘ ಹಾಗೂ ಆಳ್ವಾಸ್ ನರ್ಸಿಂಗ್ ವಿದ್ಯಾರ್ಥಿಗಳ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ ಮಲೇರಿಯಾ ವಿರೋಧ ಮಾಸಾಚರಣೆಯ ಪ್ರಚಾರದ 12ನೇ ಕಾರ್ಯಕ್ರಮಕ್ಕೆ ಮಂಗಳವಾರ ಮೂಡಿಬಿದಿರೆಯ ಗಂಟಾಲ್‌ಕಟ್ಟೆಯಲ್ಲಿ ಚಾಲನೆ ನೀಡಿ ಮಾತನಾಡಿದರು. ಈ ಸಂದರ್ಭ ಸಮುದಾಯ ಆರೋಗ್ಯ ಕೇಂದ್ರದ ಹಿರಿಯ ಆರೋಗ್ಯ ಮೇಲ್ವೀಚಾರಕ ವಿಜಯ್ ಕಲ್ಲಬೆಟ್ಟು ಶಾಲಾಭಿವೃದ್ಧಿ ಸಮತಿಯ ಮಾಜಿ ಅಧ್ಯಕ್ಷ ಆಲಿದ್‌ಮತ್ತು ಗ್ರಾಮಸ್ಥರು, ಆಳ್ವಾಸ್ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಇನ್ನು ಪುರಸಭೆಯ ಪೌರ ಕಾರ್ಮಿಕರು ಪರಿಸರದಲ್ಲಿ ಬಿದ್ದಿರುವ ಪ್ಲಾಸ್ಟಿಕ್ ತ್ಯಾಜ್ಯ, ತೋಡುಗಳಲ್ಲಿ ತುಂಬಿರುವ ತ್ಯಾಜ್ಯಗಳನ್ನು ತೆಗೆದು ಸ್ವಚ್ಛಗೊಳಿಸಿದರು. ಆಳ್ವಾಸ್‌ನ ವಿದ್ಯಾರ್ಥಿಗಳು ಮನೆ ಮನೆಗೆ ಭೇಟಿ ನೀಡಿ ಲಾರ್ವಾ ಸಮೀಕ್ಷೆ ನಡೆಸಿದರು ಮತ್ತು ಸ್ವಚ್ಛತೆಯ ಬಗ್ಗೆ ಮಾಹಿತಿಯನ್ನು ನೀಡಿದರು.

Related posts

Leave a Reply

Your email address will not be published. Required fields are marked *