Header Ads
Breaking News

ಮಾರುತಿ ಓಮ್ನಿಯಲ್ಲಿ ಅಕ್ರಮವಾಗಿ ದನದ ಕರು ಸಾಗಾಟ : ಆರೋಪಿಗಳ ಬಂಧನ

ಮಾರುತಿ ಓಮ್ನಿಯಲ್ಲಿ ಕೇರಳಕ್ಕೆ ಅಕ್ರಮವಾಗಿ ಕರುವನ್ನು ಸಾಗಾಟ ಮಾಡುತ್ತಿರುವ ಕುರಿತು ಖಚಿತ ಮಾಹಿತಿ ಮೇರೆಗೆ ವಾಹನ ತಪಾಸಣೆ ನಡೆಸಿ ಓಮ್ನಿ ಕಾರಿನಲ್ಲಿ ಕಟ್ಟಿ ಹಾಕಿದ ಸ್ಥಿತಿಯಲ್ಲಿದ್ದ ಕರುವನ್ನು ಪುತ್ತೂರು ಪೊಲೀಸರು ರಕ್ಷಣೆ ಮಾಡಿದ ಘಟನೆ ನರಿಮೊಗರು ಸಮೀಪದ ಪುರುಷರಕಟ್ಟೆಯಲ್ಲಿ ನಡೆದಿದೆ.

ಮಾರುತಿ ಓಮ್ನಿ ಚಾಲಕ ಕಾಸರಗೋಡು ಬಂದಡ್ಕ ನಿವಾಸಿ ಶಿವಪ್ರಸಾದ್ ಭಟ್ ಮತ್ತು ಬಂದಡ್ಕದ ಮಾಣಿಮೂಲೆ ನಿವಾಸಿ ಚಂದ್ರನ್ ಬಂಧಿತ ಆರೋಪಿಗಳು. ಹಿಂದೂ ಜಾಗರಣಾ ವೇದಿಕೆ ಸಂಘಟನೆಯ ಮಾಹಿತಿಯಂತೆ ಪೊಲೀಸರು ನರಿಮೊಗರು ಗ್ರಾಮದ ಪುರುಷರಕಟ್ಟೆಯಲ್ಲಿ ನರಿಮೊಗರು ಕಡೆಯಿಂದ ಬರುತ್ತಿರುವ ಮಾರುತಿ ಓಮ್ನಿಯನ್ನು ತಡೆದು ತಪಾಸಣೆ ನಡೆಸಿದಾಗ ಓಮ್ನಿಯ ಹಿಂದಿನ ಸೀಟ್‍ನಲ್ಲಿ ಒಂದೂವರೆ ವರ್ಷದ ಹೆಣ್ಣು ಕರುವೊಂದನ್ನು ಕಟ್ಟಿ ಹಾಕಿರುವುದು ಬೆಳಕಿಗೆ ಬಂದಿದೆ. ಜೊತೆಗೆ ಗೋ ಸಾಗಾಟಕ್ಕೆ ಇಲಾಖೆಯಿಂದ ಯಾವುದೇ ಅನುಮತಿ ಇಲ್ಲದಿರುವುದು ವಿಚಾರಣೆ ವೇಳೆ ಬೆಳಕಿಗೆ ಬಂದಿದ್ದ ಹಿನ್ನೆಲೆಯಲ್ಲಿ ಆರೋಪಿಗಳಾದ ಚಾಲಕ ಶಿವಪ್ರಸಾದ್ ಭಟ್ ಮತ್ತು ಚಂದ್ರನ್ ಟಿ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಕರು ಸಾಗಾಟಕ್ಕೆ ಬಳಸಿದ್ದ ಮಾರುತಿ ಓಮ್ನಿ ವಶ ಪಡಿಸಿಕೊಳ್ಳಲಾಗಿದೆ.

Related posts

Leave a Reply

Your email address will not be published. Required fields are marked *