

ಉಳ್ಳಾಲ ಬೋಟ್ ದುರಂತದಲ್ಲಿ ನಾಪತ್ತೆಯಾದ ಆರು ಮಂದಿ ಪೈಕಿ ನಾಲ್ವರ ಮೃತದೇಹ ಪತ್ತೆಯಾಗಿದೆ. ದುರಂತ ಬಗ್ಗೆ ಮುಖ್ಯಮಂತ್ರಿ ಗಮನಕ್ಕೆ ತರಲಾಗಿದ್ದು, ನಾಳೆ ಸಂಜೆಯೊಳಗೇ ಪರಿಹಾರ ಘೋಷಿಸಲಾಗುವುದು ಎಂದು ಬಂದರು ಮತ್ತು ಮೀನುಗಾರಿಕಾ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿರುವ ಶವಾಗಾರಕ್ಕೆ ಭೇಟಿ ನೀಡಿ ಮೃತದೇಹವನ್ನು ಸಂದರ್ಶಿಸಿ ಮಾಧ್ಯಮದ ಜೊತೆ ಮಾತನಾಡಿದರು. ಘಟನೆಗೆ ಸಂಬಂಧಿಸಿ ನೈಜ ಕಾರಣ ಕುರಿತು ತನಿಖೆ ಮಾಡಲಾಗುವುದು ಎಂದು ಹೇಳಿದ್ದಾರೆ. ಈ ಸಂದರ್ಭದಲ್ಲಿ ಶಾಸಕರಾದ ಡಾ. ವೈ ಭರತ್ ಶೆಟ್ಟಿ, ವೇದವ್ಯಾಸ್ ಕಾಮತ್ ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.