Header Ads
Breaking News

1೦ ಕೋಟಿ ರೂಪಾಯಿ ವೆಚ್ಚದಲ್ಲಿ ಮುಲ್ಕಿಯಲ್ಲಿ ತಲೆ ಎತ್ತಲಿದೆ ಮಿನಿ ವಿಧಾನ ಸೌಧ

ಮುಲ್ಕಿಯಲ್ಲಿ 1೦ ಕೋಟಿ ರೂಪಾಯಿ ವೆಚ್ಚದಲ್ಲಿ ಮಿನಿವಿಧಾನ ಸೌಧ ಮುಂದಿನ ಒಂದೂವರೆ ವರ್ಷದಲ್ಲಿ ಆಗಲಿದೆ. ಹೋಬಳಿ ಮಟ್ಟದಲ್ಲಿ ಪಿಂಚಣಿ ಅದಾಲತ್ ಹಾಗೂ ಕಂದಾಯ ಅದಾಲತ್‌ನ ವಿಶೇಷ ಅಂದೋಲನ ಮಾಡಲಾಗುವುದು ಎಂದು ಎಂದು ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿ ಐವನ್ ಡಿಸೋಜಾ ಹೇಳಿದರು.

ಹಳೆಯಂಗಡಿಯ ಮೂಲ್ಕಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ರಾಜ್ಯದಲ್ಲಿ 36 ಕೋಟಿ ಅನುದಾನ ಜಿಲ್ಲಾ ಪಂಚಾಯಿತಿಗಳಿಗೆ ನೀಡಲಾಗುವುದು. ಪ್ರತೀ ಜಿಲ್ಲಾ ಪಂಚಾಯಿತಿಗೆ ಸುಮಾರು 85 ಲಕ್ಷ ಸಿಗುವ ಸಂಭವವಿದೆ. ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಆದಾಯ ಹಾಗೂ ಜಾತಿ ಸರ್ಟಿಫಿಕೇಟ್‌ಗಳನ್ನು ತ್ವರಿತ ವಿಲೇವಾರಿ ಮಾಡಲು ಗ್ರಾಮ ಕರಣಿಕರಿಗೆ ಸೂಚಿಸಲಾಗಿದೆ. ತೋಕೂರು ಕೆರೆಗೆ 2 ಕೋಟಿ ಅನುದಾನ ಮಂಜೂರಾಗಿದ್ದು ಟೆಂಡರ್ ಪ್ರಕ್ರಿಯೆ ನಡೆಯುತ್ತಿದೆ. ಎಂದರು. ಬಿಜೆಪಿ ನಾಯಕರಿಗೆ ಗ್ರಾಮ ವಾಸ್ತವ್ಯದ ಅರಿವಿಲ್ಲದೆ ಮುಖ್ಯಮಂತ್ರಿಗಳ ಅಭಿವೃದ್ಧಿಯ ಚಿಂತನೆಯಿಂದ ನಡೆಸುವ ಕಾರ್ಯಕ್ಕೆ ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೆ. ಗ್ರಾಮ ವಾಸ್ತವ್ಯದಲ್ಲಿ ಗ್ರಾಮದ ಕುಂದುಕೊರತೆ, ಸಮಸ್ಯೆ, ಬೇಡಿಕೆ, ಪರಿಹಾರ, ಅಧಿಕಾರಿಗಳ ಹಾಗೂ ಸರಕಾರ ಸೂಕ್ತವಾಗಿ ಸ್ಪಂದಿಸುತ್ತದೆ. ಇದನ್ನು ಬಿಜೆಪಿಗರು ಮೊದಲು ಅರಿಯಲಿ ಎಂದು ಹೇಳಿದರು.

ಈ ಸಂದರ್ಭ ಕೆಪಿಸಿಸಿ ಸದಸ್ಯ ಎಚ್.ವಸಂತ ಬೆರ್ನಾಡ್, ಮೂಲ್ಕಿ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಧನಂಜಯ ಮಟ್ಟು, ಪ್ರಧಾನ ಕಾರ್ಯದರ್ಶಿ ಬಿ.ಎಂ.ಆಸೀಫ್, ಮೂಲ್ಕಿ ಮಹಿಳಾ ಕಾಂಗ್ರೇಸ್ ಅಧ್ಯಕ್ಷೆ ಪದ್ಮಾವತಿ ಶೆಟ್ಟಿ, ಹಳೆಯಂಗಡಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಜಲಜಾ ಮತ್ತಿತರರು ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *