Header Ads
Breaking News

ಮೂಡುಬಿದಿರೆ ಪುರಸಭೆ ವ್ಯಾಪ್ತಿಯ ಖಾತೆ, ಲೈಸನ್ಸ್ ಸಮಸ್ಯೆಗಳಿಗೆ ತಾತ್ಕಾಲಿಕ ಮುಕ್ತಿ

ಮೂಡುಬಿದಿರೆ ಪುರಸಭಾ ವ್ಯಾಪ್ತಿಯಲ್ಲಿರುವ ಹಳೆಯ ಬಡಾವಣೆಗಳಲ್ಲಿ ಬಾಕಿ ಇರುವ ನಿವೇಶನಗಳಲ್ಲಿ ಮನೆ ನಿರ್ಮಾಣಕ್ಕೆ ಪುರಸಭೆಯಿಂದಲೇ ಖಾತೆ ಮತ್ತು ಲೈಸನ್ಸ್ ನೀಡಲು ಸರ್ಕಾರ ಆದೇಶ ನೀಡಿದೆ ಎಂದು ಮೂಡಾ ಅಧ್ಯಕ್ಷ ಮೇಘನಾಥ ಶೆಟ್ಟಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಅವ್ರು ಮೂಡುಬಿದ್ರೆಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ಮೂಡುಬಿದಿರೆಯಲ್ಲಿ ಮೂಡಾದ ತಾಂತ್ರಿಕ ಸಮಸ್ಯೆಯಿಂದಾಗಿ ಸಾವಿರಾರು ಮಂದಿಗೆ ಮನೆ ನಿರ್ಮಾಣಕ್ಕೆ ಅಡಚಣೆಯಾಗಿದ್ದು ಸರ್ಕಾರದ ಈ ಆದೇಶದಿಂದ ತಾತ್ಕಾಲಿಕ ಪರಿಹಾರ ದೊರೆತಿದೆ ಎಂದ್ರು.
ಶಾಸಕ ಉಮಾನಾಥ ಕೋಟ್ಯಾನ್ ಮಾತನಾಡಿ, ಮೂಡಾದ ಸಮಸ್ಯೆಯಿಂದಾಗಿ ದಿನಂಪ್ರತಿ ನೂರಾರು ಮಂದಿ ನನ್ನ ಬಳಿ ಬಂದು ಅಳಲನ್ನು ತೋಡಿಕೊಳ್ಳುತ್ತಿದ್ದಾರೆ. ಅವರ ಸಮಸ್ಯೆಗಳಿಗೆ ಪ್ರಾಮಾಣಿಕವಾಗಿ ಸ್ಪಂದಿಸುವುದು ಜನಪ್ರತಿನಿಧಿಯಾಗಿ ನನ್ನ ಕರ್ತವ್ಯ ಎಂದರು.
ಇದೇ ವೇಳೆ ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಎಂ, ಪುರಸಭಾಧ್ಯಕ್ಷ ಪ್ರಸಾದ್ ಕುಮಾರ್, ಉಪಾಧ್ಯಕ್ಷ ಸ್ಮಜಾತ, ಎಪಿಎಂಸಿ ಅಧ್ಯಕ್ಷ ಕೃಷ್ಣರಾಜ ಹೆಗ್ಡೆ, ಜಿಪಂ ಸದಸ್ಯ ಕೆ.ಪಿ.ಸುಚರಿತ ಶೆಟ್ಟಿ, ಮೂಡಾ ಸದಸ್ಯರಾದ ಲಕ್ಷ್ಮಣ್ ಪೂಜಾರಿ, ಗೋಪಾಲ ಶೆಟ್ಟಿಗಾರ್, ಮಂಜುನಾಥ ರೈ ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *