Header Ads
Header Ads
Header Ads
Header Ads
Header Ads
Header Ads
Breaking News

ಮೂಡುಬಿದಿರೆ ಬೃಹತ್ ಜನಜಾಗೃತಿ ಸಮಾವೇಶ

ಮೂಡುಬಿದಿರೆ : ಗಾಂಧೀಜಿಯ ತತ್ವ ಆದರ್ಶಗಳ ಬಗ್ಗೆ ಮಾತನಾಡುವ ನಾವು ಎಷ್ಟು ಮಂದಿ ಅವರ ಆದರ್ಶವನ್ನು ಮೈಗೂಡಿಸಿಕೊಂಡಿದ್ದೇವೆಂದರೆ ಉತ್ತರಿಸಲು ಕಷ್ಟವಾದೀತು. ಗಾಂಧಿ ಕಂಡ ಕನಸುಗಳನ್ನು ನವ ಸಮಾಜ ನಿರ್ಮಾಣ ಮಾಡುವ ಮೂಲಕ ಡಾ.ವೀರೇಂದ್ರ ಹೆಗ್ಗಡೆಯವರು ಅನುಷ್ಠಾನಗೊಳಿಸುತ್ತಿದ್ದಾರೆ. ಸಾವಿರಾರು ಮಂದಿ ಮದ್ಯ ಮುಕ್ತರಾಗಿ ಹೊಸ ಬದುಕನ್ನು ನೀಡಿರುವ ಹೆಗ್ಗಡೆಯವರ ವ್ಯಕ್ತಿತ್ವ ಸರ್ಕಾರಕ್ಕೆ ಮಾರ್ಗದರ್ಶನ ನೀಡುವಷ್ಟರ ಮಟ್ಟಿಗೆ ಬೆಳೆದಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.ಎಸ್‌ಕೆಡಿಆರ್‌ಡಿಪಿ ಮತ್ತು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ, ಮೂಡುಬಿದಿರೆ, ಕಾರ್ಕಳವನ್ನು ಒಳಗೊಂಡಂತೆ ಉಡುಪಿ ಜಿಲ್ಲೆಯ ಬೃಹತ್ ಜನಜಾಗೃತಿ ಸಮಾವೇಶವನ್ನು ಬುಧವಾರ ಪದ್ಮಾವತಿ ಕಲಾಮಂದಿರದಲ್ಲಿ ಉದ್ಘಾಟಿಸಿ ಮಾತನಾಡಿದರು.
ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ, ಇಂದು ಯುವಜನರು ದುಶ್ಚಟಗಳಿಗೆ ಬಹುಬೇಗನೆ ಬಲಿಯಾಗುತ್ತಿದ್ದಾರೆ. ಯುವಜನರಿಗೆ ಅವರ ಬದುಕಿನ ಜವಾಬ್ದಾರಿಯನ್ನು ತಿಳಿಸಿ, ಮಾದಕವಸ್ತುಗಳಂತಹ ದುಶ್ಚಟಗಳಿಂದ ಅವರನ್ನು ವಿಮುಖರನ್ನಾಗಿಸುವ ಪ್ರಯತ್ನವಾಗಬೇಕಾಗಿದೆ ಎಂದರು.

ಶಾಸಕ ಉಮಾನಾಥ ಕೋಟ್ಯಾನ್, ಮಾಜಿ ಸಚಿವ ಅಭಯಚಂದ್ರ ಜೈನ್, ಕೆ. ಅಮರನಾಥ ಶೆಟ್ಟಿ, ಶ್ರೀಕ್ಷೇತ್ರ ಧರ್ಮಸ್ಥಳದ ಸುರೇಂದ್ರ ಕುಮಾರ್, ಅಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ, ಚೌಟರ ಅರಮನೆಯ ಕುಲದೀಪ ಎಂ. ಮತ್ತಿತರರು ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *