Header Ads
Breaking News

ಮೇ 20ಕ್ಕೆ ಕಾರ್ಕಳದ ಮಂಜುನಾಥ ಪೈ ಸಾಂಸ್ಕøತಿಕ ಸಭಾಭವನದಲ್ಲಿ ಹಿರಿಯ ಮುಖಂಡರಿಗೆ ಅಭಿನಂದನಾ ಕಾರ್ಯಕ್ರಮ

ಬಿಜೆಪಿಯ ಹಿರಿಯ ಮುಖಂಡರಾದ ಬೋಳ ಪ್ರಭಾಕರ್ ಕಾಮತ್ ಹಾಗೂ ಎಂ.ಕೆ. ವಿಜಯ ಕುಮಾರ್ ಅವರಿಗೆ ಅಭಿನಂದನಾ ಕಾರ್ಯಕ್ರಮ ಮಂಜುನಾಥ ಪೈ ಸಾಂಸ್ಕøತಿಕ ಸಭಾಭವನದಲ್ಲಿ ಮೆ 20ರಂದು ಸಂಜೆ 4:30ಕ್ಕೆ ನಡೆಯಲಿದೆ ಎಂದು ಕಾರ್ಕಳ ಕ್ಷೇತ್ರದ ಶಾಸಕರಾದ ಸುನೀಲ್ ಕುಮಾರ್ ತಿಳಿಸಿದ್ದಾರೆ.

ಅವರು ಕಾರ್ಕಳದ ಸೊಸೈಟಿ ಬ್ಯಾಂಕ್‍ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಪರಿಷತ್ ಮಾಜಿ ಸಭಾಪತಿ ಡಿ.ಎಚ್. ಶಂಕರಮೂರ್ತಿ, ಅಖಿಲ ಭಾರತೀಯ ಕುಟುಂಬ ಪ್ರಬೋಧಿನಿ ಸಂಯೋಜಕ ಕಜಂಪಾಡಿ ಸುಬ್ರಹ್ಮಣ್ಯ ಭಟ್ ವಂದನಾ ನುಡಿಗೈಯಲಿದ್ದಾರೆ. ದ.ಕ., ಉಡುಪಿ ಬಿಜೆಪಿ ಪ್ರಮುಖರು ಸೇರಿದಂತೆ ಅನೇಕರು ಭಾಗವಹಿಸಲಿದ್ದಾರೆ. ಸಂಜೆ 4 ಗಂಟೆಯಿಂದ ಮೆರವಣಿಗೆ ನಡೆಯಲಿದೆ ಎಂದು ಶಾಸಕ, ಅಭಿನಂದನಾ ಸಮಿತಿ ಅಧ್ಯಕ್ಷ ವಿ. ಸುನಿಲ್ ಕುಮಾರ್ ಹೇಳಿದರು. ಸಮಿತಿಯ ಬೋಳ ಸದಾಶಿವ ಶೆಟ್ಟಿ, ರಾಜೇಶ್ ರಾವ್, ನವೀನ್‍ಚಂದ್ರ ಜೈನ್, ವಿಜಯ ಶೆಟ್ಟಿ, ಆಂತೋನಿ ಡಿ’ಸೋಜಾ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು

Related posts

Leave a Reply

Your email address will not be published. Required fields are marked *