Header Ads
Breaking News

ಮೋದಿ ಸರ್ಕಾರ ಯಾವುದೇ ಮಹತ್ತರ ಯೋಜನೆ ಜಾರಿಗೆ ತಂದಿಲ್ಲ : ಜೆ.ಆರ್.ಲೋಬೋ ಆರೋಪ

ಕಳೆದ ಐದು ವರುಷದಲ್ಲಿ ಮೋದಿ ಸರ್ಕಾರ ಯಾವುದೇ ಮಹತ್ತರ ಯೋಜನೆಗಳನ್ನು ಜಾರಿಗೆ ತಂದಿಲ್ಲ ಅಂತಾ ಮಾಜಿ ಶಾಸಕ ಜೆ.ಆರ್.ಲೋಬೋ ಆರೋಪಿಸಿದರು. ಈ ಕುರಿತು ಮಂಗಳೂರಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಜನತೆಗೆ ನೀಡಿದ ಭರವಸೆಯನ್ನು ಈಡೇರಿಕೆ ಮಾಡಿಲ್ಲ, ಉದ್ಯೋಗ ಸೃಷ್ಠಿಸುವಲ್ಲಿ ಕೂಡ ಕೇಂದ್ರ ಸರ್ಕಾರ ವಿಫಲವಾಗಿದೆ. ಲಕ್ಷಾಂತರ ಜನರು ಉದ್ಯೋಗವಿಲ್ಲದೇ ತೊಂದರೆ ಪಡುತ್ತಿದ್ದಾರೆ . ಇನ್ನು ಸಂಸದರು ಕೂಡ ಯಾವುದೇ ಯೋಜನೆಗಳನ್ನು ಜಾರಿಗೆ ತಂದಿಲ್ಲ, ಜಿಲ್ಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಕೂಡ ಪೂರ್ಣಗೊಂಡಿಲ್ಲ ಎಂದು ಆರೋಪಿಸಿದರು. ಇನ್ನು ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಕೊಟ್ಟಿರುವ ಭರವಸೆಯನ್ನ ಈಡೇರಿಸಲು ಪಕ್ಷ ಬದ್ಧವಾಗಿದೆ ಎಂದು ಇದೇ ವೇಳೆ ತಿಳಿಸಿದರು.

Related posts

Leave a Reply

Your email address will not be published. Required fields are marked *