Header Ads
Breaking News

ಯಡಿಯೂರಪ್ಪ ಅವರೇ ಸಿಎಂ ಆಗಿ ಮುಂದುವರಿಯಲಿದ್ದಾರೆ ; ಮಂಗಳೂರಿನಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿಕೆ

ರಾಜ್ಯದಲ್ಲಿ ಯಡಿಯೂರಪ್ಪನವರು ಚೆನ್ನಾಗಿ ಕೆಲಸ ಮಾಡ್ತಿದ್ದಾರೆ. ಅವರೇ ಸಿಎಂ ಆಗಿ ಮುಂದುವರಿಯುತ್ತಾರೆ ಬದಲಾವಣೆಯ ಯಾವುದೇ ಚರ್ಚೆ ನಡೆದಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು.

ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸಂದರ್ಭದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸುದ್ದಿಗಾರರೊಂದಿಗೆ ಮಾತಾನಾಡಿದರು. ಸಿಎಂ ಯಡಿಯೂರಪ್ಪ ಬದಲಾವಣೆ ಕುರಿತ ಸಿದ್ದರಾಮಯ್ಯ ಟ್ವೀಟ್ ವಿಚಾರದ ಕುರಿತು ಮಾತಾನಾಡಿದ ಅವರು, ಯಡಿಯೂರಪ್ಪನವರು ಚೆನ್ನಾಗಿ ಕೆಲಸ ಮಾಡ್ತಿದ್ದಾರೆ. .ಅವರೇ ಸಿಎಂ ಆಗಿ ಮುಂದುವರಿಯುತ್ತಾರೆ ಎಂದರು. ಮದುವೆಗಾಗಿ ಮತಾಂತರ ವಿರುದ್ಧ ಕಾಯ್ದೆ ವಿಚಾರದ ಪ್ರತಿಕ್ರಿಯೆ ನೀಡಿದ ಅವರು, ಉಚ್ಛ ನ್ಯಾಯಾಲಯದ ಹೇಳಿಕೆ ನಂತರ ಈ ವಿಚಾರ ಚರ್ಚೆಗೆ ಬಂದಿದೆ. ವಿವಿಧ ರಾಜ್ಯ ಸರಕಾರಗಳು ಈಗಾಗಲೇ ಕ್ರಮಕ್ಕೆ ಮುಂದಾಗಿದೆ. ಹಾಗೇಯೆ ಕರ್ನಾಟಕದಲ್ಲಿ ಕಾಯ್ದೆಯನ್ನು ಜಾರಿಗೆ ತರಲಿ ಎಂದು ಹೇಳುವ ಮೂಲಕ ಸಿಟಿ ರವಿ ಹೇಳಿಕೆಗೆ ಕೇಂದ್ರ ಸಚಿವ ಜೋಶಿ ಬೆಂಬಲ ನೀಡಿದರು.

Related posts

Leave a Reply

Your email address will not be published. Required fields are marked *