Header Ads
Breaking News

ಯಶಸ್ವಿಯಾಗಿ ನಡೆದ ಸಿಇಟಿ ಪರೀಕ್ಷೆ- ಅಡೆತಡೆಗಳಿಲ್ಲದೆ ಪರೀಕ್ಷೆ ಬರೆದ ಕೇರಳದ ವಿದ್ಯಾರ್ಥಿಗಳು

ದ್ವಿತೀಯ ಪಿಯುಸಿ ಪೂರೈಸಿದ ವಿಜ್ಞಾನ ವಿದ್ಯಾರ್ಥಿಗಳಿಗೆ ಕಳೆದ ಮೂರು ದಿನಗಳಿಂದ ಮೆಡಿಕಲ್ ಮತ್ತು ಇಂಜಿನಿಯರಿಂಗ್ ಪ್ರವೇಶ ಪರೀಕ್ಷೆ ಸಮಾಪ್ತಿಗೊಂಡಿದ್ದು, ಕೇರಳದಿಂದ ಆಗಮಿಸಿದ್ದ ವಿದ್ಯಾರ್ಥಿಗಳು ಯಾವುದೇ ಅಡೆತಡೆಯಿಲ್ಲದೆ ಪರೀಕ್ಷೆಯನ್ನು ಮುಗಿಸಿ ತಲಪಾಡಿ ಗಡಿ ಮೂಲಕ ಕೇರಳಕ್ಕೆ ತೆರಳಿದರು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆ ಜಿಲ್ಲಾಡಳಿತದೊಂದಿಗೆ ಪರೀಕ್ಷೆಯನ್ನು ಯಶಸ್ವಿಯಾಗಿ ಮುಗಿಸಿದ್ದು, ಕಳೆದ ಮೂರು ದಿನಗಳಿಂದ ಕೇರಳದ ಕೆಎಸ್‌ಆರ್‍ಟಿಸಿಯ 11 ಬಸ್ಸುಗಳಲ್ಲಿ ಕಾಂಞಗಾಡ್‌ನಿಂದ ತಲಪಾಡಿ ಗಡಿ ಪ್ರದೇಶದವರೆಗೆ ವಿದ್ಯಾರ್ಥಿಗಳನ್ನು ಕರೆತಂದು ಅಲ್ಲಿಂದ ತಲಪಾಡಿ ಪೊಲೀಸ್ ಚೆಕ್‌ಫೋಸ್ಟ್‌ನಲ್ಲಿ ವಿದ್ಯಾರ್ಥಿಗಳ ತಪಾಸಣೆ ನಡೆಸಿ ಮಂಗಳೂರಿನ ವಿವಿಧ ಪರೀಕ್ಷಾ ಕೇಂದ್ರಗಳಿಗೆ ತಲುಪಿಸಲಾಗುತ್ತಿತ್ತು. ತಲಪಾಡಿಯಿಂದ ವಿವಿಧ ಖಾಸಗಿ ಕಾಲೇಜುಗಳ ಬಸ್‌ಗಳಲ್ಲಿ ವಿದ್ಯಾರ್ಥಿಗಳನ್ನು ತಲುಪಿಸುವ ಕಾರ್ಯವನ್ನು ನಡೆಸಲಾಗುತ್ತಿತ್ತು. ಶನಿವಾರ ಪರೀಕ್ಷೆ ಪ್ರಕ್ರಿಯೆ ಮುಗಿದ ಬಳಿಕ ವಿದ್ಯಾರ್ಥಿಗಳನ್ನು ತಲಪಾಡಿ ಗಡಿ ದಾಟಿಸಿ ಪರೀಕ್ಷಾ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದರು.
ಕೇರಳ ಗಡಿ ಭಾಗದ ಬಸ್ಸು ವ್ಯವಸ್ಥೆಯ ಸಂಯೋಜಕ ಹಾಗೂ ಕಿಟ್ಟೆಲ್ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ವಿಠಲ್ ಅಬೂರ ಮಾತನಾಡಿ ಎರಡು ದಿನಗಳ ಪರೀಕ್ಷೆಯಲ್ಲಿ425 ವಿದ್ಯಾರ್ಥಿಗಳಲ್ಲಿ 300 ವಿದ್ಯಾರ್ಥಿಗಳು ಹಾಜರಾಗಿದ್ದು, 270 ವಿದ್ಯಾರ್ಥಿಗಳನ್ನು ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳ ಬಸ್ಸುಗಳಲ್ಲಿ ಜಿಲ್ಲಾಡಳಿತದ ಪರವಾಗಿ ಪರೀಕ್ಷಾ ಕೇಂದ್ರಗಳಲ್ಲಿ ತಲುಪಿಸಿ ಪರೀಕ್ಷೆ ಮುಗಿದ ಬಳಿಕ ಗಡಿ ಪ್ರದೇಶಗಳಿಗೆ ತಲುಪಿಸಲಾಯಿತು. ಶನಿವಾರ ಕನ್ನಡ ಭಾಷಾ ಪರೀಕ್ಷಗೆ 360 ವಿದ್ಯಾರ್ಥಿಗಳಲ್ಲಿ 210 ವಿದ್ಯಾರ್ಥಿಗಳು ಪರೀಕ್ಷಗೆ ಹಾಜರಾಗಿದ್ದಾರೆ ಎಂದರು.

Related posts

Leave a Reply

Your email address will not be published. Required fields are marked *