Header Ads
Breaking News

ಯೋಗಿ ಆದಿತ್ಯನಾಥ್ ವಿರುದ್ಧ ಅವಹೇಳನಕಾರಿ ಹೇಳಿಕೆ ವಿಚಾರ- ಮಿಥುನ್ ರೈ ವಿರುದ್ಧ ದೂರು

ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ಅವಮಾನಕಾರಿ ಹೇಳಿಕೆ ನೀಡಿದ ಆರೋಪದ ಹಿನ್ನಲೆಯಲ್ಲಿ ಯುವ ಕಾಂಗ್ರೇಸ್ ಅಧ್ಯಕ್ಷ ಮಿಥುನ್ ರೈ ವಿರುದ್ಧ ದೂರು ದಾಖಲಾಗಿದೆ.

ಪುತ್ತೂರು ನಗರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಿಸಿರುವ ಹಿಂದೂ ಜಾಗರಣ ವೇದಿಕೆಯ ಪ್ರಧಾನ ಕಾರ್ಯದರ್ಶಿ ಅವಿನಾಶ್ ಪುರುಷರ ಕಟ್ಟೆ ಮಿಥುನ್ ರೈ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.ಯೋಗಿ ಆದಿತ್ಯನಾಥ್ ಹಿಂದೂ ಧರ್ಮದ ಹಾಗೂ ನಾಥ ಪಂಥದ ಗುರುವಾಗಿದ್ದು, ಸ್ವಾಮೀಜಿ ಸ್ಥಾನದಲ್ಲಿರುವ ಮಿಥುನ್ ರೈ, ಅವಹೇಳನಕಾರಿಯಾಗಿ ಮಾತನಾಡಿರುವುದು ಹಿಂದೂ ಧರ್ಮದ ಅನುಯಾಯಿಗಳ ಭಾವನೆಗೆ ಧಕ್ಕೆಯಾಗಿದೆ ಎಂದೂ ದೂರಿನಲ್ಲಿ ಆರೋಪಿಸಲಾಗಿದೆ.

Related posts

Leave a Reply

Your email address will not be published. Required fields are marked *