Header Ads
Breaking News

ರಾಜಕೀಯ ಲಾಭಕೋಸ್ಕರ ನಿಗಮ ಸ್ಥಾಪನೆ-ಮಂಗಳೂರಿನಲ್ಲಿ ಮಾಜಿ ಸಚಿವ ರಮಾನಾಥ ರೈ

ಮಂಗಳೂರು : ರಾಜ್ಯ ಸರ್ಕಾರ ಮರಾಠ ಪ್ರಾಧಿಕಾರ ನಿಗಮ ಸ್ಥಾಪಿಸಿರುವುದು ಚುನಾವಣಾ ಗಿಮಿಕ್ ಎಂದು ಮಾಜಿ ಸಚಿವ ರಮಾನಾಥ ರೈ ಹೇಳಿದರು. ಅವರು ಮಂಗಳೂರಿನಲ್ಲಿ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದರು. ಬಿಜೆಪಿಯವರು ರಾಜಕೀಯ ಲಾಭಕ್ಕಾಗಿಯೇ ಪ್ರಾಧಿಕಾರ ರಚನೆ ಮಾಡಿದ್ದಾರೆ. ಇದೀಗ ದುರ್ಬಲ ವರ್ಗದವರೂ ನಿಗಮ ಸ್ಥಾಪನೆಗೆ ಒತ್ತಡ ಹೇರುತ್ತಿದ್ದಾರೆ. ಆದರೆ ನಮ್ಮ ಪಕ್ಷ ಚುನಾವಣೆಯ ದೃಷ್ಠಿಕೋನ ಇಟ್ಟುಕೊಂಡು ಯಾವುದೇ ಕಾರ್ಯಕ್ರಮ ಜಾರಿಗೆ ತಂದಿಲ್ಲ. ಬಡವರಿಗೆ ಮತ್ತು ದುರ್ಬಲ ವರ್ಗದವರಿಗೆ ಉಪಯೋಗವಾಗುವ ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದೇವೆ ಎಂದು ಹೇಳಿದರು. ಮಂಗಳೂರು ವಿಮಾನ ನಿಲ್ದಾಣಕ್ಕೆ ಮರುನಾಮಕರಣಕ್ಕೆ ಆಗ್ರಹಿಸಿ ಯೂತ್ ಕಾಂಗ್ರೆಸ್‌ನಿಂದ ಯಶಸ್ವಿ ಕಾರ್ಯಕ್ರ ನಡೆದಿದೆ. ಸರ್ಕಾರಕ್ಕೆ ಸಂಬಂಧಪಟ್ಟ ಅನೇಕ ಸಂಸ್ಥೆಗಳನ್ನು ಖಾಸಗೀಕರಣ ಮಾಡುತ್ತಿದ್ದಾರೆ, ಕಾಂಗ್ರೆಸ್ ಇರುವಾಗ ಅನೇಕ ಕಂಪೆನಿಗಳನ್ನು ನಿರ್ಮಾಣ ಮಾಡಿದ್ರು, ಅದನ್ನು ಈಗ ಬಿಜೆಪಿ ಸರ್ಕಾರ ಬಂಡವಾಳ ಶಾಹಿಗಳಿಗೆ ಗುತ್ತಿಗೆಗೆ ನೀಡುತ್ತಿದ್ದಾರೆ ಎಂದು ಹೇಳಿದರು.

Related posts

Leave a Reply

Your email address will not be published. Required fields are marked *