Header Ads
Breaking News

ರಾಜ್ಯದಲ್ಲಿ ಕೊರೊನಾ ವೈರಸ್ ಭೀತಿ ಹಿನ್ನೆಲೆ : ನಗರದ ವೆನ್ಲಾಕ್ ಆಸ್ಪತ್ರೆಯಲ್ಲಿ ಐಸೊಲೇಷನ್ ವಾರ್ಡ್ ನಿರ್ಮಾಣ

ರಾಜ್ಯದಲ್ಲಿ ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಎಲ್ಲ ಕಡೆ ಕಟ್ಟೆಚ್ಚರ ವಹಿಸಲಾಗಿದೆ. ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸ್ಕ್ರೀನಿಂಗ್ ವ್ಯವಸ್ಥೆ ಮಾಡಲಾಗಿದ್ದು ವಿದೇಶಗಳಿಂದ ಆಗಮಿಸುವ ಪ್ರತಿಯೊಬ್ಬರ ಮೇಲೂ ನಿಗಾ ವಹಿಸಲಾಗಿದೆ. ದುಬೈ ಸೇರಿದಂತೆ ಎಲ್ಲ ದೇಶಗಳಿಂದ ಬರುವ ಫ್ಲೈಟ್ ನಲ್ಲಿ ಹೆಚ್ಚುವರಿ ತಪಾಸಣೆ ಕೈಗೊಳ್ಳಲಾಗಿದೆ. ಅದೇ ರೀತಿ ಹಡಗಿನ ಮೂಲಕ ಎನ್‌ಎಂಪಿಟಿ ಬಂದರಿಗೆ ಆಗಮಿಸುವ ಮಂದಿಯನ್ನೂ ತಪಾಸಣೆಗೆ ಒಳಪಡಿಸುತ್ತಿದ್ದಾರೆ. ಮಂಗಳೂರಿನ ಜಿಲ್ಲಾಸ್ಪತ್ರೆ ವೆನ್ಲಾಕ್ ಸೇರಿದಂತೆ ಪ್ರಮುಖ ಖಾಸಗಿ ಆಸ್ಪತ್ರೆಗಳಲ್ಲಿ ಪ್ರತ್ಯೇಕ ವಾರ್ಡ್ ರಚಿಸಲಾಗಿದೆ. ಸೋಂಕು ಬಗ್ಗೆ ಸಂಶಯ ಬಂದವರನ್ನು ಈ ವಾರ್ಡಿನಲ್ಲಿಟ್ಟು ಚಿಕಿತ್ಸೆ ನೀಡಲು ಉದ್ದೇಶಿಸಲಾಗಿದೆ. ಸೌದಿ ಅರೇಬಿಯಾ, ಇರಾನ್, ಕುವೈತ್ ರಾಷ್ಟ್ರಗಳಲ್ಲಿ ಕೊರೋನಾ ವೈರಸ್ ಕಂಡುಬಂದಿರುವುದು ರಾಜ್ಯದ ಕರಾವಳಿಯಲ್ಲಿ ಭೀತಿ ಸೃಷ್ಟಿಸಿದೆ. ಕರಾವಳಿ ಭಾಗದ ಅತಿ ಹೆಚ್ಚು ಮಂದಿ ಕೊಲ್ಲಿ ರಾಷ್ಟ್ರಗಳಲ್ಲಿ ಇರುವುದರಿಂದ ಕೊರೊನಾ ರಾಜ್ಯಕ್ಕೆ ಹರಡದಂತೆ ನಿಗಾ ಇಡಲಾಗಿದೆ. ದುಬೈ ರಾಷ್ಟ್ರಗಳಿಂದ ಪ್ರತಿ ದಿನ ಸಾವಿರಾರು ಮಂದಿ ಮಂಗಳೂರಿಗೆ ಆಗಮಿಸುತ್ತಾರೆ. ಈ ವೇಳೆ ಸೋಂಕು ಬರದಂತೆ ತಡೆಯುವುದು ಮಂಗಳೂರಿನ ಜಿಲ್ಲಾಡಳಿತಕ್ಕೆ ಸವಾಲಾಗಿ ಪರಿಣಮಿಸಿದೆ. ಸೋಂಕಿನ ಲಕ್ಷಣಗಳ ಬಗ್ಗೆ ಏರ್ಪೋರ್ಟ್ ಪರಿಸರದಲ್ಲಿ ಭಿತ್ತಿಪತ್ರಗಳನ್ನು ಅಂಟಿಸಿದ್ದು ಪ್ರಯಾಣಿಕರು ಎಚ್ಚರ ವಹಿಸುವಂತೆ ಸೂಚನೆ ನೀಡಲಾಗಿದೆ.

Related posts

Leave a Reply

Your email address will not be published. Required fields are marked *