Header Ads
Header Ads
Breaking News

ನ.12ರಂದು ನಡೆಯಲಿರುವ ಉಪಚುನಾವಣೆಗೆ ಜೆಡಿಯು ಪಕ್ಷವು ತನ್ನ ಉಮೇದುವಾರರನ್ನು ಕಣಕ್ಕೆ ಇಳಿಸಲಿದೆ : ಚಂದ್ರಶೇಖರ್ ಸ್ಥಾವರಮಠ್

ರಾಜ್ಯದಲ್ಲಿ ನವೆಂಬರ್ 12ರಂದು ಉಪಚುನಾವಣೆ ನಡೆಯಲಿದ್ದು, ಜೆಡಿಯು ಪಕ್ಷವು ತನ್ನ ಉಮೇದುವಾರರನ್ನು ಕಣಕ್ಕೆ ಇಳಿಸಲಿದೆ ಎಂದು ಜೆಡಿಯು ವಕ್ತಾರರಾದ ಚಂದ್ರಶೇಖರ್ ಸ್ಥಾವರಮಠ್ ತಿಳಿಸಿದ್ರು.

ಅವರು ಮಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ಜೆಡಿಯು ಪಕ್ಷವು ರಾಜ್ಯದಲ್ಲಿ ನಡೆಯಲಿರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಚ್ಚಾರಿತ್ರವುಳ್ಳ ಜನಪರ ಕಾಳಜಿ ಹೊಂದಿರುವ ಪಕ್ಷದ ಕಾರ್ಯಕರ್ತರನ್ನು ಚುನಾವಣಾ ಕಣಕ್ಕೆ ಇಳಿಸಲಿದೆ. ಮಂಗಳೂರು ಮಹಾನಗರ ಪಾಲಿಕೆಯ 60ವಾರ್ಡ್‌ಗಳಲ್ಲಿ ಪಕ್ಷದ ತತ್ವ ಸಿದ್ಧಾಂತವನ್ನು ಒಪ್ಪಿ ಬರುವ ಅಭ್ಯರ್ಥಿಗಳನ್ನು ಪರಿಗಣಿಸಿ ಸ್ಪರ್ಧೆಗೆ ಅವಕಾಶ ನೀಡಲಾಗುತ್ತದೆ ಎಂದರು.  ಈ ಸಂದರ್ಭ ಜೆಡಿಯು ಹಿರಿಯ ಮುಖಂಡರು ಹಾಗೂ ಪ್ರಧಾನ ಕಾರ್ಯದರ್ಶಿ ಇ.ಆನಂದ್, ಮಂಗಳೂರು ಜಿಲ್ಲಾ ಅಧ್ಯಕ್ಷ ಅನ್ವರ್ ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *